ಲಕ್ನೋ: ನಕಲಿ ವೈದ್ಯನೊಬ್ಬ (Doctor) ಸಣ್ಣ ಶಸ್ತ್ರಚಿಕಿತ್ಸೆ ನಡೆಸಿ ಎರಡೂವರೆ ತಿಂಗಳ ಮಗು ಮೃತಪಟ್ಟ ಘಟನೆ ಉತ್ತರ ಪ್ರದೇಶದ (Uttar Pradesh) ಇಟಾಹ್‍ನಲ್ಲಿ ನಡೆದಿದೆ.
ತಿಲಕ್ ಸಿಂಗ್ ನಕಲಿ ವೈದ್ಯ. ಮಗುವಿಗೆ ಅನಾರೋಗ್ಯ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮಗುವಿಗೆ ತಿಲಕ್ ಸಿಂಗ್ ಶಸ್ತ್ರ ಚಿಕಿತ್ಸೆ ನಡೆಸಿದ್ದಾನೆ. ಅದಾದ ಬಳಿಕ ಅತಿಯಾದ ರಕ್ತಸ್ರಾವ ಉಂಟಾಗಿ ಮಗು ಮೃತಪಟ್ಟಿದೆ.
Advertisement
Advertisement
ಮಗು ಮೃತಪಟ್ಟ ನಂತರ ತಿಲಕ್ ಸಿಂಗ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಅಷ್ಟೇ ಅಲ್ಲದೇ ಮಗುವಿನ (Baby) ಸಾವಿನ ವಿಷಯವನ್ನು ಕುಟುಂಬದವರಿಗೆ ತಿಳಿಸಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ದುಬೈಗೆ ಹಾರಿದ ಬಿಗ್ ಬಾಸ್ ಬೆಡಗಿ ದೀಪಿಕಾ ದಾಸ್
Advertisement
Advertisement
ಘಟನೆಗೆ ಸಂಬಂಧಿಸಿ ನಕಲಿ ವೈದ್ಯ ತಿಲಕ್ ಸಿಂಗ್ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಉಮೇಶ್ ಚಂದ್ರ ತ್ರಿಪಾಠಿ ತಿಳಿಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಡಿ.ಕೆ ಶಿವಕುಮಾರ್ ಸ್ಪರ್ಧಿಸಲಿ – ಸ್ಥಳೀಯ ಕಾಂಗ್ರೆಸ್ ನಾಯಕರ ಮನವಿ