ಬೆಂಗಳೂರು: ಮನೆಯ ಮುಂದೆ ಆಟವಾಡುತ್ತಿದ್ದ ಮಗುವನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿಕೊಂಡು ಕ್ಷಣಾರ್ಧದಲ್ಲಿ ಎಸ್ಕೇಪ್ ಆದ ಘಟನೆ ನಗರದ ಹೊರವಲಯ ಬನ್ನೇರುಘಟ್ಟದ ಕಲ್ಕೆರೆ ಬಳಿ ನಡೆದಿದೆ.
ಉದ್ಯಮಿ ಮಂಜುನಾಥ್ ರೆಡ್ಡಿ ಎಂಬವರ ಮಗಳು ಮನೆಯ ಮುಂಭಾಗ ಆಟವಾಡುತ್ತಿದ್ದ ವೇಳೆ ಏಕಾಏಕಿ ಬಂದ ದುಷ್ಕರ್ಮಿಗಳ ತಂಡ ಮಗುವನ್ನು ಎತ್ತಿಕೊಂಡು ಪರಾರಿಯಾಗಿದೆ. ಇತ್ತ ಮಗುವನ್ನು ಎತ್ತಿಕೊಂಡು ಪರಾರಿಯಾಗುತ್ತಿದ್ದ ವೇಳೆ ಮಗು ಕಿರುಚಾಡಿದೆ. ಕೂಡಲೇ ಸ್ಥಳೀಯರು ಮಗುವಿನ ಕಿರುಚಾಟ ಕೇಳಿ ವಾಹನದಲ್ಲಿ ತೆರಳುತ್ತಿದ್ದವರನ್ನು ಹಿಂಬಾಲಿಸಿದ್ದಾರೆ. ಇದನ್ನೂ ಓದಿ: ಮಲಗಿದ್ದಾಗ ಐಟಿಬಿಪಿ ಶಿಬಿರದಿಂದ ಯೋಧರ ಎರಡು AK-47 ರೈಫಲ್ ಕಳವು – ವಿಶೇಷ ತಂಡದಿಂದ ತಲಾಶ್
ಸ್ಥಳೀಯರು ಬೆನ್ನಟ್ಟುತ್ತಿದ್ದಂತೆ ಗಾಬರಿಗೊಂಡ ದುಷ್ಕರ್ಮಿಗಳು ಮಗುವನ್ನು ಕಾಡಿನೊಳಗೆ ಹೊತ್ತೊಯ್ದಿದ್ದಾರೆ. ಕಾಡಿನೊಳಗೆ ಸ್ಥಳೀಯರು ನುಗ್ಗುತ್ತಿದ್ದಂತೆ ಜನರನ್ನು ನೋಡಿ ಗಾಬರಿಗೊಂಡು ಮಗುವನ್ನು ಕಾಡಿನೊಳಗೆ ಬಿಟ್ಟು ಅಸಾಮಿಗಳು ಪರಾರಿಯಾಗಿದ್ದಾರೆ.
ಮಂಜುನಾಥ ರೆಡ್ಡಿ ಇತ್ತೀಚೆಗೆ ಉದ್ಯಮದಲ್ಲಿ ಹೆಸರು ಮಾಡಿದ್ದರು. ಹಣದ ವಿಚಾರವಾಗಿ ಮಗುವನ್ನು ಕಿಡ್ನ್ಯಾಪ್ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: 11 ರಾಜ್ಯಗಳಲ್ಲಿ ಮಹಿಳೆಯರೇ ಹೆಚ್ಚು ಸೆಕ್ಸ್ ಪಾಲುದಾರರನ್ನು ಹೊಂದಿದ್ದಾರೆ: ವರದಿ