ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಮೂರನೇ ಭಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಅರವಿಂದ್ ಕೇಜ್ರಿವಾಲ್ ಸಮಾರಂಭಕ್ಕೆ ವಿಶೇಷ ಅತಿಥಿಯೊಬ್ಬರಿಗೆ ಆಪ್ ಪಕ್ಷ ಆಹ್ವಾನ ನೀಡಿದೆ.
ವಿಧಾನಸಭಾ ಫಲಿತಾಂಶದ ವೇಳೆ ದೇಶದ ಗಮನ ಸೆಳೆದಿದ್ದ ಬೇಬಿ ಮಫ್ಲರ್ ಮ್ಯಾನ್‍ಗೆ ಕೇಜ್ರಿವಾಲ್ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ. ಭಾನುವಾರ ಬೆಳಗ್ಗೆ 10 ಗಂಟೆಗೆ ಕೇಜ್ರಿವಾಲ್ ಪ್ರಮಾಣವಚನ ಸ್ವೀಕರಿಸಲಿದ್ದು, ಭಾರೀ ಪ್ರಮಾಣದಲ್ಲಿ ಜನ ಸೇರುವ ನಿರೀಕ್ಷೆ ಇದೆ. ಈ ಕಾರ್ಯಕ್ರಮದಲ್ಲಿ ಬೇಬಿ ಮಫ್ಲರ್ ಮ್ಯಾನ್ ವಿಶೇಷ ಅತಿಥಿಯಾಗಿ ಕಾಣಿಸಿಕೊಳ್ಳಲಿದ್ದಾರೆಂದು ಆಮ್ ಆದ್ಮಿ ಪಕ್ಷ ಘೊಷಿಸಿದೆ.
62 ಸ್ಥಾನಗಳನ್ನು ಗೆಲ್ಲುವ ಮೂಲಕ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಭಾನುವಾರ ನಡೆಯಲಿರುವ ಪ್ರಮಾಣವಚನ ಸಮಾರಂಭಕ್ಕೆ ರಾಮಲೀಲಾ ಮೈದಾನದಲ್ಲಿ ಅದ್ಧೂರಿ ತಯಾರಿ ಮಾಡಿಕೊಳ್ಳುತ್ತಿದ್ದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ರಾಜಕೀಯ ಗಣ್ಯರಿಗೆ ಆಹ್ವಾನ ನೀಡಲು ಚಿಂತನೆ ನಡೆದಿದೆ.
ಮೂರನೇ ಬಾರಿಗೆ ಸರ್ಕಾರ ರಚನೆ ಕಸರತ್ತು ಆರಂಭಿಸಿರುವ ಕೇಜ್ರಿವಾಲ್ ಬುಧವಾರ ಬೆಳಗ್ಗೆ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಭೇಟಿಯಾಗಿ ಚರ್ಚೆ ನಡೆಸಿ ಫೆಬ್ರವರಿ 16 ರಂದು ಕಾರ್ಯಕ್ರಮ ಮಾಡಲು ಒಪ್ಪಿಗೆ ಪಡೆದುಕೊಂಡಿದ್ದರು. ಬಳಿಕ ನೂತನವಾಗಿ ಆಯ್ಕೆಯಾಗಿರುವ ಎಲ್ಲ ಶಾಸಕರಿಗೂ ಕೇಜ್ರಿವಾಲ್ ತಮ್ಮ ನಿವಾಸಕ್ಕೆ ಆಹ್ವಾನ ನೀಡಿ ಹೊಸ ಸರ್ಕಾರ ರಚನೆ ಬಗ್ಗೆ ಚರ್ಚೆ ನಡೆಸಿದ್ದರು. ಈ ಹಿಂದೆ ಎರಡು ಬಾರಿ ಅರವಿಂದ್ ಕೇಜ್ರಿವಾಲ್ ಫೆಬ್ರವರಿ 14ರ ಪ್ರೇಮಿಗಳ ದಿನದಂದು ಪ್ರಮಾಣ ವಚನ ಸ್ವೀಕರಿಸಿದ್ದರು.
Big Announcement:
Baby Mufflerman is invited to the swearing in ceremony of @ArvindKejriwal on 16th Feb.
Suit up Junior! pic.twitter.com/GRtbQiz0Is
— AAP (@AamAadmiParty) February 13, 2020