ಬೆಂಗಳೂರು ಗ್ರಾಮಾಂತರದಲ್ಲಿ ಮಗುವಿಗೆ ಕೊರೊನಾ ಪಾಸಿಟಿವ್

Public TV
2 Min Read
CORONA VIRUS 1 1

ಬೆಂಗಳೂರು: ರಾಜ್ಯದಲ್ಲಿ ಕೊರೊನಾ (Corona Virus) ಭೀತಿ ಮತ್ತೆ ಶುರುವಾಗಿದ್ದು, ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ. ಇದೀಗ ಬೆಂಗಳೂರು ಗ್ರಾಮಾಂತರದಲ್ಲಿ ಮೊದಲ ಕೇಸ್ ಪತ್ತೆಯಾಗಿದೆ.

ದೇವನಹಳ್ಳಿ ತಾಲೂಕಿನ ನಲ್ಲೂರು ಬಳಿ ಮಗುವಿಗೂ ಕೊರೊನಾ ವಕ್ಕರಿಸಿದೆ. ಸ್ಪರ್ಶ ಮಕ್ಕಳಧಾಮದಲ್ಲಿದ್ದ ಮಗುವಿಗೆ ಕೊರೊನಾ ಪಾಸಿಟಿವ್ (Corona Positive For Baby) ಇರುವುದು ದೃಢವಾಗಿದೆ. ಜ್ವರ, ಕೆಮ್ಮು ಅಂತ ಟೆಸ್ಟ್ ಮಾಡಿಸಿದಾಗ ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ. ಸದ್ಯ ತೀವ್ರ ಉಸಿರಾಟದ ತೊಂದರೆ (ಸಾರಿ) ಕೇಸ್ ಹಿನ್ನೆಲೆ ತಾಲೂಕು ಆಸ್ಪತ್ರೆಯಲ್ಲಿ ಮಗುವನ್ನು ಐಸೋಲೆಷನ್‍ನಲ್ಲಿ ಇರಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಡಿ.ಸಿ ಶಿವಶಂಕರ್ ಹೇಳಿದ್ದಾರೆ.

CORONA VIRUS 3

ಸ್ವರ್ಶ ಮಕ್ಕಳ ಧಾಮದಲ್ಲಿ ಮೊದಲ‌ ಕೊರೊನಾ ಕೇಸ್ ಹಿನ್ನೆಲೆಯಲ್ಲಿ ಮಕ್ಕಳ ಧಾಮದ 21 ಮಂದಿ ಮಕ್ಕಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಟೆಸ್ಟಿಂಗ್ ಮಾಡಲಾಗಿದೆ. ಗಂಟಲು ದ್ರವ ಸ್ಯಾಂಪಲ್ ಪಡೆದು ಅಧಿಕಾರಿಗಳು ಟೆಸ್ಟಿಂಗ್ ಗೆ ಕಳುಹಿಸಿದ್ದು, ಸಂಜೆ ರಿಪೋರ್ಟ್‌ ಬರಲಿದೆ. ಇದನ್ನೂ ಓದಿ: PublicTV Explainer: ಹೊಸ ವರ್ಷದ ಹೊತ್ತಲ್ಲೇ ದೇಶಕ್ಕೆ ಕಾಲಿಟ್ಟ ಕೊರೊನಾ ಹೊಸ ತಳಿ; ಏನಿದು ಜೆಎನ್‌.1? ಇದು ಅಪಾಯಕಾರಿಯೇ?

ಪಾಸಿಟಿವ್‌ ಕಂಡು ಬಂದ ಹಿನ್ನೆಲೆಯಲ್ಲಿ ಇಂದು ಸಿಬ್ಬಂದಿ ಮಕ್ಕಳ ಧಾಮ ಹಾಗೂ ಶಾಲೆಗೆ ಸ್ಯಾನಿಟೈಸ್ ಮಾಡಲಿದ್ದಾರೆ. ಟೆಸ್ಟಿಂಗ್ ರಿಪೋರ್ಟ್ ಬರುವವರೆಗೂ ಎಲ್ಲಾ ಮಕ್ಕಳು ಹೋಂ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ. ಶಾಲೆ ಹಾಗೂ ಮಕ್ಕಳಧಾಮದಲ್ಲಿ ಕೆಮ್ಮು, ನೆಗಡಿ ಹಾಗೂ ಜ್ವರ ಇದೆಯಾ ಅನ್ನೋದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಮಕ್ಕಳ‌ ಜೊತೆ ಸಂಪರ್ಕದಲ್ಲಿದ್ದವರ ಬಗ್ಗೆಯೂ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

CORONA VIRUS 4

ಇತ್ತ ಬೆಂಗಳೂರಿನ ಗಾಂಧಿನಗರ ನಿವಾಸಿ 25 ವರ್ಷದ ಯುವಕನಲ್ಲಿಯೂ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಯಾವುದೇ ಟ್ರಾವೆಲ್ ಹಿಸ್ಟರಿ (Travel History) ಇಲ್ಲದಿದ್ದರೂ ಕೊರೊನಾ ವಕ್ಕರಿಸಿಕೊಂಡಿದೆ. ಸದ್ಯ ಈತನಿಗೆ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ಕು ಜನರನ್ನ ಪ್ರೈಮರಿ ಮತ್ತು ಸೆಕೆಂಡರಿ ಕಾಂಟ್ಯಾಕ್ಟ್ ಮೇಲೆ ಟೆಸ್ಟ್ ಗೆ ಒಳಪಡಿಸಲಾಗಿದೆ.

CORONA VIRUS 2

ಬೆಂಗಳೂರಲ್ಲಿ ಸಕ್ರಿಯ ಕೇಸ್ ಶತಕದತ್ತ ಮುನ್ನುಗುತ್ತಿದೆ. ರಾಜ್ಯದಲ್ಲಿ 105 ಆಕ್ಟೀವ್ ಕೇಸ್ ಇದ್ದರೆ ಬೆಂಗಳೂರಲ್ಲಿ 93 ಕೊರೊನಾ ಪ್ರಕರಣಗಳಿವೆ. ಟ್ರಾವೆಲ್ ಹಿಸ್ಟರಿ ಇಲ್ಲದಿದ್ರು ಕೇಸ್ ಏರಿಕೆ ಆಗುವ ಮೂಲಕ ಆತಂಕ ಹೆಚ್ಚಿಸಿದೆ. ಗುರುವಾರದಿಂದ ಟೆಸ್ಟಿಂಗ್ ಪ್ರಮಾಣ ಕೂಡ ಹೆಚ್ಚಳವಾಗಿದ್ದು, ನಿನ್ನೆಯಿಂದ 1,500 ಮಂದಿಯನ್ನು ಟೆಸ್ಟಿಂಗ್‍ಗೆ ಒಳಪಡಿಸಲಾಗಿದೆ. ಟೆಸ್ಟಿಂಗ್ ಹೆಚ್ಚಳದಿಂದ ಸೋಂಕು ಹೆಚ್ಚಳ ಸಾಧ್ಯತೆ ಇದೆ.

Share This Article