– 3 ವಿಕೆಟ್ ಕಿತ್ತ ವಾಷಿಂಗ್ಟನ್ ಸುಂದರ್
ಹರಾರೆ: ನಾಯಕ ಶುಭಮನ್ ಗಿಲ್ ಮತ್ತು ಋತುರಾಜ್ ಗಾಯಕ್‌ವಾಡ್ ಅವರ ಸ್ಫೋಟಕ ಆಟ ಮತ್ತು ಬೌಲರ್‌ಗಳ ಸಂಘಟಿತ ಪ್ರಯತ್ನದಿಂದಾಗಿ ಜಿಂಬಾಬ್ವೆ (Zimbabwe) ವಿರುದ್ಧದ ಮೂರನೇ ಟಿ20 (T20) ಪಂದ್ಯವನ್ನು ಭಾರತ (Team India) 23 ರನ್‌ಗಳಿಂದ ಜಯಗಳಿಸಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಭಾರತ 2-1 ರಲ್ಲಿ ಮುನ್ನಡೆ ಸಾಧಿಸಿದೆ.
Advertisement
Advertisement
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ 4 ವಿಕೆಟ್ ನಷ್ಟಕ್ಕೆ 182 ರನ್‌ಗಳಿಸಿತು. ಕಠಿಣ ಸವಾಲನ್ನು ಬೆನ್ನಟ್ಟಿದ ಜಿಂಬಾಬ್ವೆ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್ ಹೊಡೆದು ಸೋಲನ್ನೊಪ್ಪಿಕೊಂಡಿತು. ಇದನ್ನೂ ಓದಿ: 2.5 ಕೋಟಿ ನಗದು ಬಹುಮಾನ ನಿರಾಕರಿಸಿದ ದ್ರಾವಿಡ್ – ಕನ್ನಡಿಗನ ನಡೆಗೆ ವ್ಯಾಪಕ ಮೆಚ್ಚುಗೆ!
Advertisement
Advertisement
ಜಿಂಬಾಬ್ವೆ ಪರ ಡಿಯೋನ್ ಮೈಯರ್ಸ್ ಔಟಾಗದೇ 65 ರನ್ (49 ಎಸೆತ, 7 ಬೌಂಡರಿ, 1 ಸಿಕ್ಸರ್) ಸಿಡಿಸಿದರೆ ಕ್ಲೈವ್ ಮದಂಡೆ 37 ರನ್ (26 ಎಸೆತ, 2 ಬೌಂಡರಿ, 2 ಸಿಕ್ಸರ್) ಹೊಡೆದು ಔಟಾದರು. ವಾಷಿಂಗ್ಟನ್ ಸುಂದರ್ 3 ವಿಕೆಟ್, ಅವೇಶ್ ಖಾನ್ 2 , ಖಲೀಲ್ ಅಹ್ಮದ್ ತಲಾ ಒಂದು ವಿಕೆಟ್ ಪಡೆದರು.
ಭಾರತದ ಪರ ಮೊದಲ ವಿಕೆಟಿಗೆ ಯಶಸ್ವಿ ಜೈಸ್ವಾಲ್ (Yashasvi Jaiswal) ಮತ್ತು ನಾಯಕ ಶುಭಮನ್ ಗಿಲ್ (Shubman Gill) 67 ರನ್ ಜೊತೆಯಾಟವಾಡಿದರು. ಜೈಸ್ವಾಲ್ 36 ರನ್(27 ಎಸೆತ, 4 ಬೌಂಡರಿ, 2 ಸಿಕ್ಸರ್) ಹೊಡೆದು ಔಟಾದರೆ ಶುಭಮನ್ ಗಿಲ್ 66 ರನ್(49 ಎಸೆತ, 7 ಬೌಂಡರಿ, 3 ಸಿಕ್ಸ್) ಗಾಯಕ್‌ವಾಡ್ 49 ರನ್ (28 ಎಸೆತ, 4 ಬೌಂಡರಿ, 3 ಸಿಕ್ಸರ್) ಸಿಡಿಸಿ ಔಟಾದರು.
ಮೊದಲ ಪಂದ್ಯವನ್ನು ಜಿಂಬಾಬ್ವೆ 13 ರನ್‌ಗಳಿಂದ ಗೆದ್ದರೆ ಎರಡನೇ ಪಂದ್ಯವನ್ನು ಭಾರತ 100 ರನ್‌ಗಳಿಂದ ಗೆದ್ದುಕೊಂಡಿತ್ತು. ನಾಲ್ಕನೇ ಟಿ20 ಪಂದ್ಯ ಶನಿವಾರ ನಡೆಯಲಿದೆ.