ನವದೆಹಲಿ: ಭಾರತದ ಹೊಸ ವಿಮಾನಯಾನ ಸಂಸ್ಥೆ ಆಕಾಶ ಏರ್ ವಾಣಿಜ್ಯ ವಿಮಾನಗಳನ್ನು ಪ್ರಾರಂಭಿಸಲು ವಾಯುಯಾನ ನಿಯಂತ್ರಕದ ಅನುಮತಿ ಪಡೆದುಕೊಂಡಿದೆ ಎಂದು ಬಿಲಿಯನೇರ್ ಹಾಗೂ ಆಕಾಸ ಏರ್ ಹೂಡಿಕೆದಾರ ರಾಕೇಶ್ ಜುಂಜುನ್ವಾಲಾ ಅವರು ಟ್ವೀಟ್ ಮಾಡಿದ್ದಾರೆ.
ನಮ್ಮ ಏರ್ ಆಪರೇಟರ್ ಸರ್ಟಿಫಿಕೇಟ್ (AOC) ರಶೀದಿಯನ್ನು ಘೋಷಿಸಲು ನಾವು ಸಂತೋಷ ಪಡುತ್ತೇವೆ. ಇದೊಂದು ಮಹತ್ವದ ಮೈಲಿಗಲ್ಲಾಗಿದ್ದು, ಆಕಾಸ ವಿಮಾನ ಮಾರಾಟಕ್ಕೆ ಹಾಗೂ ವಾಣಿಜ್ಯ ಕಾರ್ಯಾಚರಣೆಗಳ ಪ್ರಾರಂಭಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಆಕಾಶ ಏರ್ ಟ್ವೀಟ್ ಮಾಡಿದೆ. ಇದನ್ನೂ ಓದಿ: ಸಲ್ಮಾನ್ ಖಾನ್ ನಂತರ, ಸಲ್ಮಾನ್ ಲಾಯರ್ ಗೆ ಜೀವ ಬೆದರಿಕೆ
ಎಒಸಿ ಹೊಸ ಏರ್‌ಲೈನ್‌ಗೆ ವಾಣಿಜ್ಯ ವಾಯುಸಾರಿಗೆ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಅನುವು ಮಾಡಿಕೊಡುತ್ತದೆ. ಇದನ್ನೂ ಓದಿ: ಲಾಲೂ ಪ್ರಸಾದ್ ಯಾದವ್ ಆರೋಗ್ಯ ಚಿಂತಾಜನಕ- ಪಾಟ್ನಾದಿಂದ ದೆಹಲಿಗೆ ಏರ್‌ಲಿಫ್ಟ್
ವಿಮಾನಯಾನ ಆರಂಭಿಸುವ ಮುನ್ನ ಸಂಸ್ಥೆಯು ತನ ಉದ್ಯೋಗಿಗಳ ಹಾಗೂ ಸಾರ್ವಜನಿಕ ಸುರಕ್ಷತೆಯನ್ನು ಖಚಿತಡಿಸಿಕೊಳ್ಳಲು ಸೂಕ್ತ ವ್ಯವಸ್ಥೆ ಹೊಂದಿರಬೇಕು. AOC ವಿಮಾನಯಾನ ಜ್ಞಾನ ವೇದಿಕೆ ಸ್ಕೈಬ್ರರಿಯು ಯಾವ ಉದ್ದೇಶಕ್ಕಾಗಿ ಮತ್ತು ಯಾವ ಭೌಗೋಳಿಕ ಪ್ರದೇಶದಲ್ಲಿ ಯಾವ ಪ್ರಕಾರದ ವಿಮಾನಗಳನ್ನು ಬಳಸಬೇಕು ಎಂಬುದನ್ನು ವಿವರಿಸುತ್ತದೆ ಎಂದು ಮಾಧ್ಯಮಗಳು ವರದಿ ಮಾಡಿವೆ.