Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ’: ಸಿನಿಮಾ ಆಯಿತು ಡಾಲಿ ಮಾತು

Public TV
Last updated: April 5, 2024 4:52 pm
Public TV
Share
2 Min Read
Badavra Maklu Belibeku kanrayya 1
SHARE

ನಟ ಡಾಲಿ ಧನಂಜಯ ಸಮಾರಂಭವೊಂದರಲ್ಲಿ ‘ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ’ (Badavra Maklu Belibeku kanrayya) ಎಂಬ ಮಾತು ಹೇಳಿದ್ದರು. ಆ ಮಾತು ಸಾಕಷ್ಟು ವೈರಲ್ ಆಗಿತ್ತು. ಈಗ ಆ ಮಾತೇ ಚಲನಚಿತ್ರದ ಶೀರ್ಷಿಕೆಯಾಗಿದೆ. ಶ್ರೀರಾಮ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿ.ಎಸ್.ವೆಂಕಟೇಶ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮಂಜುಕವಿ (Manju Kavi) ನಿರ್ದೇಶಿಸುತ್ತಿದ್ದಾರೆ. ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ರೇಣುಕಾಂಬ ಥಿಯೇಟರ್ ನಲ್ಲಿ ನೆರವೇರಿತು. ಬೆಂಗಳೂರು ಪೂರ್ವ ವಲಯದ ಡಿಸಿಪಿ ದೇವರಾಜ್ ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಭಾ.ಮ.ಹರೀಶ್ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

Badavra Maklu Belibeku kanrayya 3

ನಾನು ಕೋಲಾರ ಜಿಲ್ಲಾ ಪಂಚಾಯತ್ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದೆ. ಚಿತ್ರರಂಗದ ಸಾಕಷ್ಟು ಗಣ್ಯರು ನನಗೆ ಪರಿಚಯ. ಎಷ್ಟೋ ಸ್ನೇಹಿತರು ಚಿತ್ರ ನಿರ್ಮಾಣ ಮಾಡುವಂತೆ ಹೇಳುತ್ತಿದ್ದರು. ಈಗ ಕಾಲ ಕೂಡಿ ಬಂದಿದೆ. ಡಾಲಿ ಅವರು ಹೇಳಿದ ಮಾತೇ ಈ ಚಿತ್ರ ನಿರ್ಮಾಣಕ್ಕೆ ಸ್ಪೂರ್ತಿ. ಮಂಜುಕವಿ ಅವರು ಮಾಡಿಕೊಂಡಿರುವ ಕಥೆ ತುಂಬಾ ಚೆನ್ನಾಗಿದೆ. ನಾನು ಕೂಡ ಬಡತನದಿಂದಲೇ ಬಂದಿರುವವನು. ಹಾಗಾಗಿ ಈ ಕಥೆ ತುಂಬಾ ಇಷ್ಟವಾಯಿತು. ನನ್ನ ಸಹೋದರ ಸಮಾನರಾದ ಡಿಸಿಪಿ ದೇವರಾಜ್ ಚಿತ್ರಕ್ಕೆ ಚಾಲನೆ ನೀಡಿದ್ದಾರೆ ಅವರಿಗೆ ಹಾಗೂ ಆಗಮಿಸಿರುವ ಎಲ್ಲರಿಗೂ ಧನ್ಯವಾದ ಎಂದರು ನಿರ್ಮಾಪಕ ಸಿ.ಎಸ್ ವೆಂಕಟೇಶ್

Badavra Maklu Belibeku kanrayya 2

ಡಾಲಿ ಅವರು ಹೇಳಿದ ಮಾತನ್ನು ಸ್ಪೂರ್ತಿಯಾಗಿಟ್ಟುಕೊಂಡು ಈ ಚಿತ್ರದ ಕಥೆ ಬರೆದಿದ್ದೇನೆ. ಬಡ ಕುಟುಂಬದಲ್ಲಿ ಹುಟ್ಟಿದ ಮಕ್ಕಳಿಗೆ ಎಷ್ಟೇ ಕಲೆ ಇದ್ದರೂ, ಚೆನ್ನಾಗಿ ಓದುವ ಹಂಬಲವಿದ್ದರೂ ಅವರನ್ನು ಬೆಳೆಸಲು ಯಾರು ಮುಂದೆ ಬರುವುದಿಲ್ಲ. ಅವರಲ್ಲಿರುವ ಪ್ರತಿಭೆ ಹಾಗೆ ನಶಿಸಿ ಹೋಗುತ್ತದೆ. ಹಾಗಾಗಬಾರದು ಪ್ರತಿಭೆವುಳ್ಳ ಬಡಮಕ್ಕಳ ಕೀರ್ತಿ ಬೆಳಗಬೇಕು ಇದೇ ಚಿತ್ರದ ಕಥಾಹಂದರ.ಈ ಕಥೆ ಇಷ್ಟವಾಗಿ ಸಿ.ಎಸ್.ವೆಂಕಟೇಶ್ ಅವರು ನಿರ್ಮಾಣಕ್ಕೆ ಮುಂದಾಗಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ. ಸುಚೇಂದ್ರ ಪ್ರಸಾದ್ ಹಾಗೂ ಸಂಗೀತ ಅವರು ಮುಖ್ಯಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರ ಮಕ್ಕಳ ಪಾತ್ರದಲ್ಲಿ ರಾಜವರ್ಧನ್, ಲಾವಣ್ಯ  ವೈಭವಿ ಅಭಿನಯಿಸುತ್ತಿದ್ದಾರೆ. ಫ್ರೆಂಡ್ಸ್ ವಾಸು, ಮೂಗೂರು ಸುರೇಶ್, ಚಂದ್ರಪ್ರಭ, ಚೈತ್ರಾ ಕೊಟ್ಟೂರು, ಮಂಜು ಪಾವಗಡ, ಚಿದಾನಂದ್, ಜಗದೀಶ್ ಕೊಪ್ಪ ಶಿವಾರೆಡ್ಡಿ ಸನತ್ .ವಿನೋದ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ನಾಲ್ಕು ಹಾಡುಗಳಿದ್ದು ನಾನೇ ಸಂಗೀತ ನೀಡುತ್ತಿದ್ದೇನೆ‌.‌ ತಂದೆ‌ – ಮಗಳ ಬಾಂಧವ್ಯದ ಹಾಡೊಂದನ್ನು ಅನುರಾಧ ಭಟ್ ಹಾಡಿದ್ದಾರೆ.  ಹಿನ್ನೆಲೆ ಸಂಗೀತ ನೀಡುವುದರೊಂದಿಗೆ ವಿನುಮನಸು ಪ್ರಮುಖಪಾತ್ರದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ರೇಣುಕುಮಾರ್ ಛಾಯಾಗ್ರಹಣ ,  ವೆಂಕಿ ಯುಡಿವಿ ಸಂಕಲನ ಹಾಗೂ ಗಿರೀಶ್ ಸಾಕಿ, ಸಂಗೀತ ಶೆಟ್ಟಿ ವಿಕ್ಟರ್ ದಯಾಳ್  ನಿರ್ದೇಶನದ ತಂಡದಲ್ಲಿದ್ದಾರೆ ಎಂದು ನಿರ್ದೇಶಕ ಮಂಜುಕವಿ ತಿಳಿಸಿದರು.

 

ಸುಚೇಂದ್ರ ಪ್ರಸಾದ್ (Suchendra Prasad) , ಸಂಗೀತ ಶೆಟ್ಟಿ, ಫ್ರೆಂಡ್ಸ್ ವಾಸು, ಮೂಗೂರು ಸುರೇಶ್, ಜಗದೀಶ್ ಕೊಪ್ಪ ಮುಂತಾದ ಕಲಾವಿದರು ಚಿತ್ರದ ಕುರಿತು ಮಾತನಾಡಿದರು.

TAGGED:Badavra Maklu Belibeku kanrayyaManju KaviSuchendra Prasadಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯಮಂಜು ಕವಿಸುಚೇಂದ್ರ ಪ್ರಸಾದ್
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
15 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
16 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
18 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Ahmedabad Plane Crash 1 2
Latest

ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ

Public TV
By Public TV
6 minutes ago
Gadag Rain
Districts

ಗದಗ | ವರುಣನ ಆರ್ಭಟಕ್ಕೆ ಕೊಚ್ಚಿಹೋದ ಸೇತುವೆ – ಹರಿಯುವ ನೀರಿನಲ್ಲಿ ಜನರ ಹುಚ್ಚಾಟ

Public TV
By Public TV
8 minutes ago
Agumbe Ghat
Districts

ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

Public TV
By Public TV
31 minutes ago
Sumeet Sabharwal Clive Kundar
Latest

Mayday… unable to lift: ಕ್ಯಾಪ್ಟನ್‌ ಸುಮಿತ್‌ ಕೊನೆ ಕ್ಷಣದ ಆಡಿಯೋ ಲಭ್ಯ

Public TV
By Public TV
32 minutes ago
Air India Bird Hit Ahmedabad Plane Crash
Latest

100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

Public TV
By Public TV
52 minutes ago
Madikeri Auto Driver
Districts

40 ರೂ. ಬದಲಿಗೆ 34,000 ರೂ. ಪೇ ಮಾಡಿದ ಪ್ರಯಾಣಿಕ – ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?