ಮುಂಬೈ: ಮಹಾರಾಷ್ಟ್ರದ (Maharashtra) ಬದ್ಲಾಪುರದ ನರ್ಸರಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ (Sexual Assault) ಪ್ರಕರಣದ ಬೆನ್ನಲ್ಲೇ ಮಹಿಳಾ ಸುರಕ್ಷತೆ ಬಗ್ಗೆ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಪ್ಯಾನಿಕ್ ಬಟನ್ (Panic Button) ಅಳವಡಿಸುವ ಕಾರ್ಯಕ್ಕೆ ಮುಂದಾಗಿದೆ.
ಸಿಸಿಟಿವಿ ಮಾದರಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ (Advanced Technology) ಒಳಗೊಂಡಿರುವ ಪ್ಯಾನಿಕ್ ಬಟನ್ ಅನ್ನು ಶಾಲೆ ಹಾಗೂ ಹಾಸ್ಟೆಲ್‌ಗಳಲ್ಲಿ ಅಳವಡಿಸುವ ಕಾರ್ಯಕ್ಕೆ ಮುಂದಾಗಿದೆ ಮಹಾರಾಷ್ಟ್ರದ ಶಿಕ್ಷಣ ಸಚಿವ ದೀಪಕ್ ಕೇಸರ್ಕರ್ (Deepak Kesarkar) ತಿಳಿಸಿದ್ದಾರೆ. ಸಿಲಿಕಾನ್ ಸಿಟಿ (Silicon City) ಬೆಂಗಳೂರಿನಲ್ಲಿ ಈಗಾಗಲೇ ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರ ಸುರಕ್ಷತೆಗೆ ಪ್ಯಾನಿಕ್ ಬಟನ್ ಅಳವಡಿಸಲಾಗಿದೆ.ಇದನ್ನೂ ಓದಿ: ದರ್ಶನ್‍ಗೆ ಜೈಲಲ್ಲಿ ರಾಜಾತಿಥ್ಯ – ನಾವು ದರ್ಶನ್ ಪರವೂ ಇಲ್ಲ, ವಿರುದ್ಧವೂ ಇಲ್ಲ ಎಂದ ಸಿಎಂ
Advertisement
Advertisement
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (Department of Women and Child Welfare) ಮತ್ತು ಶಿಕ್ಷಣ ಸಚಿವಾಲಯವು (Department of Education) ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ವರದಿಯ ಮುಂದಿನ ಕ್ರಮಕ್ಕಾಗಿ ಕೇಸರ್ಕರ್ ಅವರಿಗೆ ನೀಡಲಾಗಿದೆ.
Advertisement
ಈ ವರದಿಯು ಪ್ರಕರಣದ ತನಿಖೆಯ ಭಾಗವಾಗಿ ಕಾರ್ಯನಿರ್ವಹಿಸಲಿದೆ. ವಿಶೇಷ ತನಿಖಾ ತಂಡ (Special Investigation Team) ಈಗಾಗಲೇ ಶಾಲಾ ಅಧಿಕಾರಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (Pocso) ಕಾಯ್ದೆಯ ಸೆಕ್ಷನ್ 19ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ.ಇದನ್ನೂ ಓದಿ: ಒಂದೇ ಚಿತ್ರದಲ್ಲಿ ರಣ್‌ಬೀರ್, ಆಲಿಯಾ ಭಟ್, ವಿಕ್ಕಿ ಕೌಶಲ್- ಬನ್ಸಾಲಿ ಆ್ಯಕ್ಷನ್ ಕಟ್
Advertisement
ಏನಿದು ಪ್ರಕರಣ?
ಮಹಾರಾಷ್ಟ್ರದ ಥಾಣೆಯ ಆಂಗ್ಲ ಮಾಧ್ಯಮ ನರ್ಸರಿಯಲ್ಲಿ ಕೆಲಸ ಮಾಡುತ್ತಿದ್ದ 23 ವಯಸ್ಸಿನ ಸ್ವಚ್ಛತಾ ಸಿಬ್ಬಂದಿ 4 ವರ್ಷದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಶೌಚಾಲಯದ ಒಳಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿತ್ತು. ಆರೋಪಿ, ಅಕ್ಷಯ್ ಶಿಂಧೆಯನ್ನು ಆಗಸ್ಟ್ 1, ರಂದು ಗುತ್ತಿಗೆ ಆಧಾರದ ಮೇಲೆ ನೇಮಿಸಲಾಯಿತು. ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದಾಗ ಬಾಲಕಿಯರ ಶೌಚಾಲಯವನ್ನು ಸ್ವಚ್ಛಗೊಳಿಸುವ ಹೊಣೆಗಾರಿಕೆ ಆತನಿಗೆ ನೀಡಲಾಗಿತ್ತು. ಶುಕ್ರವಾರ ರಾತ್ರಿ ಇಬ್ಬರು ಬಾಲಕಿಯರ ಪೋಷಕರು ದೂರು ದಾಖಲಿಸಿದ್ದು, ಆತನ ವಿರುದ್ಧ ಎಫ್‌ಐಆರ್ ದಾಖಲಿಸಿದ ನಂತರ ಅವನನ್ನು ಬಂಧಿಸಲಾಗಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ.