LatestLeading NewsMain PostSports

ಈ ಸಲ ವಿಶ್ವ ಚಾಂಪಿಯನ್‌ಶಿಪ್ ಟೂರ್ನಿಯಿಂದ ಪಿ.ವಿ.ಸಿಂಧು ಔಟ್ – ಕಾರಣ ಏನು?

ಮುಂಬೈ: ಕಾಮನ್‌ವೆಲ್ತ್ ಗೇಮ್ಸ್-2022ರಲ್ಲಿ ಚಿನ್ನ ಗೆದ್ದು ದಾಖಲೆ ನಿರ್ಮಿಸಿದ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಈ ವರ್ಷದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಿಂದ ಹೊರಗುಳಿಯಲಿದ್ದಾರೆ.

ಪಿ.ವಿ ಸಿಂಧು ಅವರು ಸದ್ಯ ಕಾಲಿನ ಪಾದದ ಫ್ರ್ಯಾಕ್ಚರ್‌ ಸಮಸ್ಯೆಯಿಂದಾಗಿ ಬಳಲುತ್ತಿದ್ದು, ಟೂರ್ನಿಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ನಿಮ್ಮ ಸ್ಪೂರ್ತಿದಾಯಕ ಸಾಧನೆಯೊಂದಿಗೆ ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕಾಲಿಡುತ್ತಿರುವುದು ವಿಶೇಷ: ಮೋದಿ

ಕಾಮನ್‌ಲ್ತ್‌ನಲ್ಲಿ ಚಿನ್ನದ ಪದಕ ಗೆದ್ದ ಪಿ.ವಿ.ಸಿಂದು ಕಾಲು ನೋವಿನ ಹೊರತಾಗಿಯೂ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಫೈನಲ್ಸ್ ಪಂದ್ಯವನ್ನು ಆಡಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಸಿಂಧು, `ದುರಾದೃಷ್ಟವಶಾತ್ ನಾನು ವಿಶ್ವ ಚಾಂಪಿಯನ್‌ಶಿಪ್ ಟೂರ್ನಿಯಿಂದ ಹೊರಗುಳಿಯಬೇಕಿದೆ. ಸದ್ಯ ನಾನು ಗಾಯದ ಸಮಸ್ಯೆಯಿಂದ ನೋವು ಅನುಭವಿಸುತ್ತಿದ್ದೇನೆ. ಕಾಮನ್‌ವೆಲ್ತ್ ಕ್ವಾಲಿಫೈಯರ್‌ನಲ್ಲಿಯೇ ಗಾಯದ ಭಯವಿತ್ತು. ಆದರೆ ನನ್ನ ತರಬೇತುದಾರರು ಹಾಗೂ ದೈಹಿಕ ತರಬೇತುದಾರರ ಸಹಾಯದಿಂದ ಪಂದ್ಯವನ್ನಾಡಿದೆ ಎಂದು ಸಿಂಧು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸ್ಫೋಟಕ ಆಟವಾಡಿದ ಟೆಸ್ಟ್ ಸ್ಪೆಷಲಿಷ್ಟ್‌ – ಒಂದೇ ಓವರ್‌ನಲ್ಲಿ 22 ರನ್ ಚಚ್ಚಿದ ಪೂಜಾರ

ಬರ್ಮಿಂಗ್‌ಹ್ಯಾಮ್‌ನಿಂದ ಹೈದರಾಬಾದ್‌ಗೆ ಹಿಂದಿರುಗಿದ ನಂತರ ತಕ್ಷಣ ನಾನು ಎಂಆರ್‌ಐ ಸ್ಕ್ಯಾನ್‌ಗೆ ಧಾವಿಸಿದೆ. ವೈದ್ಯರು ನನ್ನ ಎಡಪಾದದಲ್ಲಿ ಗಂಭೀರ ಸಮಸ್ಯೆಯಾಗಿರುವುದನ್ನು ಗುರುತಿಸಿ ಕೆಲ ವಾರಗಳ ವರೆಗೆ ವಿಶ್ರಾಂತಿ ಪಡೆಯುವಂತೆ ಶಿಫಾರಸು ಮಾಡಿದ್ದಾರೆ. ಕೆಲವೇ ವಾರಗಳಲ್ಲಿ ನಾನು ತರಬೇತಿಗೆ ಹಿಂದಿರುಗಬೇಕು. ನಿಮ್ಮೆಲ್ಲರ ಪ್ರೀತಿ ಹಾಗೂ ಬೆಂಬಲಕ್ಕಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮತ್ತೊಮ್ಮೆ ಟೀಂ ಇಂಡಿಯಾದ ಚುಕ್ಕಾಣಿ ಹಿಡಿದ ದಾದಾ – ಭಾರತ ಮಹಾರಾಜರ ರಾಜನಾದ ಗಂಗೂಲಿ

2020ರ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇದಕ್ಕೂ ಮುನ್ನ 2016ರಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್ ಟೂರ್ನಿಯಲ್ಲಿ ಮಹಿಳೆಯರ ಸಿಂಗಲ್ಸ್‌ನಲ್ಲಿ ಬೆಳ್ಳಿ ಪದಕ, 2019ರ ಟೂರ್ನಿಯಲ್ಲಿ ಚಿನ್ನದ ಪದಕ ನಂತರ ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಗೆದ್ದ ಸಾಧನೆ ಮಾಡಿದ್ದಾರೆ. ಕೊನೆಯದಾಗಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಗುಂಪು ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಹಾಗೂ ಸಿಂಗಲ್ಸ್ನಲ್ಲಿ ಚಿನ್ನದ ಪದಕ ಗೆದ್ದು ದಾಖಲೆ ಬರೆದಿದ್ದಾರೆ.

Live Tv

Leave a Reply

Your email address will not be published.

Back to top button