ಡೆಹ್ರಾಡೂನ್: ಉತ್ತರಾಖಂಡದಲ್ಲಿ (Uttarakhand) ಭಾರೀ ಮಳೆಯಾಗುತ್ತಿದ್ದು (Rain), ಹೆಲಾಂಗ್ ಬಳಿ ಹೆದ್ದಾರಿಯ ಮೇಲೆ ಬಂಡೆಗಳು ರಸ್ತೆಗೆ ಉರುಳಿ ಬಿದ್ದಿವೆ. ಇದರಿಂದಾಗಿ ಬದರಿನಾಥ್ (Badrinath) ಮಾರ್ಗವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ನಿರಂತರ ಮಳೆಯಿಂದಾಗಿ ಚಮೋಲಿಯಲ್ಲಿ ಹೆದ್ದಾರಿ ಪ್ರದೇಶದ ಮೇಲೆ ಶಿಲಾಖಂಡದ ರಾಶಿಗಳು ಮತ್ತು ಬಂಡೆಗಳು ಬಿದ್ದವೆ. ಇದರಿಂದಾಗಿ ತಾತ್ಕಾಲಿಕ ಸಂಚಾರ ಸ್ಥಗಿತಗೊಂಡಿದೆ. ಶಿಲಾಖಂಡರಾಶಿಗಳನ್ನು ತೆರವುಗೊಳಿಸಿ, ಸಂಚಾರ ಸುಗಮಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Typhoon Dolphin | ಕೇರಳಕ್ಕೆ ಆರೆಂಜ್ ಅಲರ್ಟ್ ಘೋಷಣೆ, ದಕ್ಷಿಣ ಕರ್ನಾಟಕದಲ್ಲೂ ಭಾರೀ ಮಳೆ
ರಸ್ತೆಯ ಮೇಲಿರುವ ಬಂಡೆಗಳನ್ನು ತೆರವುಗೊಳಿಸಲು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಭಾಗದ ಪ್ರದೇಶಗಳನ್ನು ಅಧಿಕಾರಿಗಳು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಆದಷ್ಟು ಬೇಗ ತೆರವುಗೊಳಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಯಾತ್ರಿಕರು, ಪ್ರವಾಸಿಗರು ಮತ್ತು ಸ್ಥಳೀಯ ನಿವಾಸಿಗಳು ಸುರಕ್ಷಿತ ಎಂದು ಘೋಷಿಸುವವರೆಗೆ ಈ ಮಾರ್ಗದಲ್ಲಿ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಸರ್ಕಾರ ಮನವಿ ಮಾಡಿದೆ. ಅಲ್ಲದೇ ಪ್ರಯಾಣಿಕರು ಅಧಿಕೃತ ಸಂಚಾರ ಮಾಹಿತಿ, ಸಲಹೆಗಳು ಮತ್ತು ಹವಾಮಾನದ ಮಾಹಿತಿಯನ್ನು ಅನುಸರಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಚಮೋಲಿ, ರುದ್ರಪ್ರಯಾಗ, ಉತ್ತರಕಾಶಿ, ಪಿಥೋರಗಢ ಮತ್ತು ಬಾಗೇಶ್ವರ ಸೇರಿದಂತೆ ಉತ್ತರಾಖಂಡದ ಬೆಟ್ಟದ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರೀ ಮಳೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಮಡಿಕೇರಿ | ಜೇಡಿಗುಂಡಿ – ಅತ್ಯಾಡಿ ಸಂಪರ್ಕಿಸುವ ಗ್ರಾಮೀಣ ರಸ್ತೆಯಲ್ಲಿ ಮತ್ತೆ ಭೂಕುಸಿತದ ಆತಂಕ



