ನವದೆಹಲಿ: ಹಿಂದೂ (Hindu) ಸಮುದಾಯವನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿಯಾಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ ಎಐಯುಡಿಎಫ್ ಮುಖ್ಯಸ್ಥ, ಅಸ್ಸಾಂನ ಲೋಕಸಭಾ ಸಂಸದ ಬದ್ರುದ್ದೀನ್ ಅಜ್ಮಲ್ (Badruddin Ajmal) ಅವರು ಶನಿವಾರ ಕ್ಷಮೆಯಾಚಿಸಿದ್ದಾರೆ (Apology).
ನಾನು ನೀಡಿರುವ ವಿವಾದಿತ ಹೇಳಿಕೆಯಿಂದ ನನಗೆ ನಾಚಿಕೆಯಾಗಿದೆ. ಆದರೂ ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾನು ಯಾವುದೇ ಸಮುದಾಯವನ್ನು ಅಥವಾ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಈ ಹೇಳಿಕೆಯನ್ನು ನೀಡಿಲ್ಲ. ನನ್ನ ಉದ್ದೇಶ ಯಾವುದೇ ವ್ಯಕ್ತಿಯ ಹೃದಯಕ್ಕೆ ಘಾಸಿ ಮಾಡುವುದಾಗಿರಲಿಲ್ಲ ಎಂದು ತಿಳಿಸಿದ್ದಾರೆ.
Advertisement
Advertisement
ನನ್ನ ಹೇಳಿಕೆ ವಿವಾದ ಹುಟ್ಟುಹಾಕಿದೆ, ಇದರಿಂದ ನನಗೆ ನಾಚಿಕೆಯಾಗಿದೆ. ನಾನು ಇದಕ್ಕಾಗಿ ಕ್ಷಮೆ ಯಾಚಿಸುತ್ತೇನೆ. ನನ್ನಂತಹ ಹಿರಿಯ ವ್ಯಕ್ತಿ ಇಂತಹ ಹೇಳಿಕೆಯನ್ನು ನೀಡಬಾರದಿತ್ತು. ಈ ಬಗ್ಗೆ ನನ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಹಿಂದೂ ನಾಯಕರು ಪ್ರತಿ ದಿನ ಮುಸ್ಲಿಮರ (Muslim) ವಿರುದ್ಧ ಮಾತನಾಡುತ್ತಾರೆ. ನಾವು ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿಲ್ಲ ಎಂದು ಹೇಳಿದ್ದಾರೆ.
Advertisement
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಜ್ಮಲ್, ಮುಸ್ಲಿಂ ಪುರುಷರು 20 ರಿಂದ 22ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಮುಸ್ಲಿಂ ಮಹಿಳೆಯರು ಸಹ ಸರ್ಕಾರದ ಅನುಮತಿ ಮೇರೆಗೆ 18ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಆದರೆ ಹಿಂದೂಗಳು ಮದುವೆಗೆ ಮುನ್ನ ಒಬ್ಬೊಬ್ಬರು 2 ಅಥವಾ 3 ಅಕ್ರಮ ಸಂಬಂಧಗಳನ್ನು ಇಟ್ಟುಕೊಳ್ಳುತ್ತಾರೆ. ಅವರು ಮಕ್ಕಳನ್ನು ಹೆರುವುದಿಲ್ಲ, ಜೀವನವನ್ನು ಆನಂದಿಸಿ ಹಣ ಉಳಿಸುತ್ತಾರೆ ಅಷ್ಟೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಗಳನ್ನು ಕೋಚಿಂಗ್ ಸೆಂಟರ್‌ಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ರಾಜಸ್ಥಾನದ ಗ್ಯಾಂಗ್‌ವಾರ್‌ಗೆ ಬಲಿ
Advertisement
ಮುಸ್ಲಿಂ ಜನಸಂಖ್ಯೆ ಹೆಚ್ಚುತ್ತಿದೆ ಎಂಬ ಆರೋಪದ ಬಗ್ಗೆ ಮಾತನಾಡಿದ ಅಜ್ಮಲ್, 40 ವರ್ಷ ವಯಸ್ಸಿನ ನಂತರ ಹಿಂದೂಗಳು ಪೋಷಕರ ಒತ್ತಡದಲ್ಲಿ ಮದುವೆಯಾಗುತ್ತಾರೆ. ಹಾಗಾದರೆ ಅವರು 40ರ ನಂತರ ಮಕ್ಕಳನ್ನು ಹೆರುತ್ತಾರೆ ಎಂದು ನೀವು ಹೇಗೆ ನಿರೀಕ್ಷಿಸುತ್ತೀರಿ? ಫಲವತ್ತಾದ ಭೂಮಿಯಲ್ಲಿ ಬಿತ್ತನೆ ಮಾಡಿದರೆ ಮಾತ್ರ ಉತ್ತಮ ಬೆಳೆಗಳನ್ನು ಬೆಳೆಯಲು ಸಾಧ್ಯ. ಆದ್ದರಿಂದ ಹಿಂದೂಗಳು ಮುಸ್ಲಿಮರ ಸೂತ್ರವನ್ನು ಅನುಸರಿಸಬೇಕು. ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ಮದುವೆ ಮಾಡಬೇಕು ಎಂದಿದ್ದರು. ಇದನ್ನೂ ಓದಿ: ಬೆತ್ತನಗೆರೆ ಶಂಕರನ ರಾಜಕೀಯ ಎಂಟ್ರಿಗೆ ಖಾಕಿ ಬ್ರೇಕ್!