ಬಾಗಲಕೋಟೆ: ಪೆಟ್ರೋಲ್ ಬಂಕ್‍ನಲ್ಲಿ ಬೈಕ್‍ಗೆ ಪೆಟ್ರೋಲ್ ಹಾಕಿಸುವಾಗ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಜಮಖಂಡಿಯಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಜಮಖಂಡಿ ನಗರದ ಪಟವರ್ಧನ ಪೆಟ್ರೋಲ್ ಪಂಪ್‍ನಲ್ಲಿ ಕಳೆದ ವಾರ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಬೈಕ್ ಸವಾರ ಯಾರು ಎಂಬುದು ತಿಳಿದು ಬಂದಿಲ್ಲ.
ಬೈಕ್ ಸವಾರ ಪೆಟ್ರೋಲ್ ಹಾಕಿಸುತ್ತಿದ್ದಾಗ ವ್ಯಕ್ತಿಯೊಬ್ಬ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದ. ಈ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪೆಟ್ರೋಲ್ ಪಂಪ್ ಸಿಬ್ಬಂದಿ ಹಾಗೂ ಸವಾರ ಗಾಬರಿಗೊಂಡಿದ್ದರು. ತಕ್ಷಣವೇ ಸ್ಥಳದಲ್ಲಿದ್ದ ಬಕೆಟ್ ಎತ್ತಿಕೊಂಡು ಮರಳನ್ನು ಸುರಿದು ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಘಟನೆಯ ದೃಶ್ಯವು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬೈಕ್ ಮುಂದೆ ನಿಂತಿದ್ದ ವ್ಯಕ್ತಿ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದದ್ದೇ ಅನಾಹುತಕ್ಕೆ ಕಾರಣವಾಗಿದೆ. ಪೆಟ್ರೋಲ್ ಪಂಪ್‍ನಲ್ಲಿ ಮೊಬೈಲ್ ಬಳಸಬಾರದು ಎಂಬ ಸೂಚನಾ ಫಲಕ ಇದ್ದರೂ ಕೆಲವರು ಮೊಬೈಲ್ ಬಳಕೆ ಮಾಡುತ್ತಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.