ಬಾಗಲಕೋಟೆ: ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ (Udupi Pejawar Vishwa Prasanna Teertha Swamiji) ಕುರಿತಾಗಿ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ (BK Hariprasad) ನೀಡಿರುವ ಹೇಳಿಕೆ ಖಂಡಿಸಿ ಇಂದು ಬಾಗಲಕೋಟೆಯ (Bagalkot) ಬ್ರಾಹ್ಮಣ ತರುಣ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಡಳಿತ ಸಭಾಭವನದ ಎದುರು ಜಮಾಯಿಸಿದ ಬ್ರಾಹ್ಮಣ ಸಮಾಜದವರು (Brahmin Community Members) ಬಿ.ಕೆ.ಹರಿಪ್ರಸಾದ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Advertisement
ಸಂಘದ ಅಧ್ಯಕ್ಷ ನಾರಾಯಣ ದೇಸಾಯಿ ಅವರು ಮಾತನಾಡಿ, ರಾಮಮಂದಿರ (Ram Mandir) ನಿರ್ಮಾಣ ಹೋರಾಟದಲ್ಲಿ ಪೇಜಾವರ ಮಠದ ಹಿರಿಯ ಶ್ರೀಗಳು ನೇತೃತ್ವ ವಹಿಸಿದ್ದರೆ, ಮೂರ್ತಿ ಪ್ರತಿಷ್ಠಾಪನೆಯನ್ನು ಈಗಿನ ವಿಶ್ವಪ್ರಸನ್ನತೀರ್ಥರು ನೆರವೇರಿಸಿದ್ದರು. ಶ್ರೀಮಠಕ್ಕೆ ಭವ್ಯ ಪರಂಪರೆಯಿದ್ದು ಅವರ ಕುರಿತಾಗಿ ಮಾತನಾಡುವಾಗ ಎಚ್ಚರವಹಿಸಬೇಕು ಎಂದು ಆಕ್ರೋಶ ಹೊರ ಹಾಕಿದರು.
Advertisement
Advertisement
ಬ್ರಾಹ್ಮಣ ಸಮಾಜದ ತ್ರಿಮಸ್ಥ ಸ್ವಾಮೀಜಿ ಹಾಗೂ ಮುಖಂಡರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದರೆ ಇನ್ನು ಸಮಾಜ ಸಹಿಸುವುದಿಲ್ಲ. ಸಮಾಜದ ಯುವಕರು ಪ್ರತಿಭಟಿಸಲು ಸಜ್ಜಾಗಿದ್ದು, ಮತದಾನದ ಮೂಲಕ ಉತ್ತರ ನೀಡುವುದು ಸಹ ಸಮಾಜಕ್ಕೆ ತಿಳಿದಿದೆ ಎಂದು ಎಚ್ಚರಿಕೆ ನೀಡಿದರು.
Advertisement
ಪಂಡಿತ್ ರಘೋತ್ತಮಾಚಾರ್ಯ ನಾಗಸಂಪಿಗೆ, ಪಂ.ಭೀಮಸೇನಾಚಾರ್ಯ ಪಾಂಡುರಂಗಿ ಅವರು ಮಾತನಾಡಿ, ಪೇಜಾವರ ಶ್ರೀಗಳು ಎಲ್ಲ ಸಮಾಜದೊಡನೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಗೋಶಾಲೆ, ದೀನದಲಿತರ ಏಳಿಗೆಗೆ ಶ್ರಮಿಸಿದ್ದಾರೆ. ಅಂಥವರ ಬಗ್ಗೆ ರಾಜಕಾರಣಿಗಳು ಮಾತನಾಡುವಾಗ ಎಚ್ಚರದಿಂದ ಇರಬೇಕೆಂದು ಹೇಳಿದರು. ಇದನ್ನೂ ಓದಿ: ಜಾತ್ಯಾತೀತ ರಾಷ್ಟ್ರದಲ್ಲಿ ಜಾತಿ ಗಣತಿ ಯಾಕೆ? – ವಿಶ್ವಪ್ರಸನ್ನ ತೀರ್ಥ ಶ್ರೀ
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷ ಡಾ.ಗಿರೀಶ ಮಸೂರಕರ ಮಾತನಾಡಿ, ಬ್ರಾಹ್ಮಣರ ಸಂಖ್ಯೆ ಕಡಿಮೆ ಎನ್ನುವ ಮನೋಭಾವದಲ್ಲಿ ಸಮಾಜದ ಕುರಿತಾಗಿ ಲಘುವಾಗಿ ಮಾತನಾಡಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ಸಮಾಜ ಪರಿವರ್ತನೆಯ ತಾಕತ್ತು ನಮಗಿದೆ. ಸಂದರ್ಭ ಬಂದಾಗ ಉತ್ತರಿಸುತ್ತೇವೆ ಎಂದರು.
ಬಿ. ಕೆ. ಹರಿಪ್ರಸಾದ್ ತಮ್ಮ ಮಾತನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ಹರಿಪ್ರಸಾದ್ ಹೇಳಿದ್ದೇನು?
ಜಾತಿಗಣತಿ ವಿಚಾರದ ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದ ಪೇಜಾವರ ಶ್ರೀ, ಸರ್ಕಾರ ಹಣ ಖರ್ಚು ಮಾಡಿ ಜಾತಿ ಜನಗಣತಿ (Caste Census) ಮಾಡಿ ಮುಚ್ಚಿಟ್ಟಿದೆ. ಜಾತ್ಯಾತೀತವಾಗಿರುವ (Secular) ರಾಷ್ಟ್ರದಲ್ಲಿ ಜಾತಿ ಗಣತಿ ಯಾಕೆ ಬೇಕು ಎಂದು ಪ್ರಶ್ನಿಸಿದ್ದರು. ಒಂದು ಕಡೆ ಜಾತಿ ಆಧಾರದಲ್ಲಿ ರಾಜಕೀಯ ಬೇಡ ಎನ್ನುತ್ತೀರಿ. ಇನ್ನೊಂದು ಕಡೆ ಜಾತಿಗಣತಿ ಎನ್ನುತ್ತೀರಿ. ಈ ಜಾತಿ ಗಣತಿ ಯಾಕೆ ಎನ್ನುವುದು ತಿಳಿಯುತ್ತಿಲ್ಲ ಎಂದಿದ್ದರು.
ಈ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಹರಿಪ್ರಸಾದ್, ಪೇಜಾವರ ಸ್ವಾಮೀಜಿ ಅವರು ಪುಡಿ ರಾಜಕಾರಣಿಗಳಂತೆ ಹೇಳಿಕೆ ನೀಡುತ್ತಿದ್ದಾರೆ. ಪೇಜಾವರ ಸ್ವಾಮೀಜಿ ಅವರು ಕಾವಿ ಬಟ್ಟೆ ತ್ಯಜಿಸಿ ಬಂದರೆ ಅವರಿಗೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದರು.