ಬಾಗಲಕೋಟೆ: ಜಮ್ಮು ಕಾಶ್ಮೀರದಲ್ಲಿ ಸೇವೆಯಲ್ಲಿದ್ದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಮ್ಮಡ ಗ್ರಾಮದ ಸಿಆರ್‍ಪಿಎಫ್ ಯೋಧರೊಬ್ಬರು ಡೆಂಘೀ ಜ್ವರದಿಂದ ಮೃತಪಟ್ಟಿದ್ದಾರೆ.
ಮಂಜುನಾಥ್ ಮೇತ್ರಿ(30) ಮೃತಪಟ್ಟ ಯೋಧ. ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿಯ ಶಾಂತಿ ಮುಕಂದ್ ಆಸ್ಪತ್ರೆಗೆ ದಾಖಲಾಗಿದ್ದ ಮಂಜುನಾಥ್ ಅವರಿಗೆ ಡೆಂಘೀ ಕಾಣಿಸಿಕೊಂಡು ಮೃತಪಟ್ಟಿದ್ದಾರೆ.
Advertisement
8 ವರ್ಷ 9 ತಿಂಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಂಜುನಾಥ್ ಅವರು ಜಮ್ಮುಕಾಶ್ಮೀರದ ಸಿಆರ್‍ಪಿಎಫ್‍ನ 28ನೇ ಬೆಟಾಲಿಯನ್‍ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು.
Advertisement
ಮಂಜುನಾಥ್ ಅವರ ಪಾರ್ಥಿವ ಶರೀರ ದೆಹಲಿಯಿಂದ ವಿಮಾನದ ಮೂಲಕ ಬೆಳಗಾವಿಗೆ ಸಂಜೆ ಬರಲಿದ್ದು, ಬೆಳಗಾವಿಯಿಂದ ರಸ್ತೆ ಮಾರ್ಗವಾಗಿ ತಮ್ಮ ಸ್ವಗ್ರಾಮವಾದ ಚಿಮ್ಮಡ ಗ್ರಾಮಕ್ಕೆ ಪಾರ್ಥಿವ ಶರೀರ ತರಲು ಸಿದ್ಧತೆ ನಡೆಯುತ್ತಿದೆ.