ಬಾಗಲಕೋಟೆ: ಪ್ರವಚನ ಮುಗಿಸಿ ಮನೆಗೆ ತೆರಳುತ್ತಿದ್ದವರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ಹಳೆ ಬಾಗಲಕೋಟೆಯ (Hale Bagalkote) ತೆಂಗನಮಠ ಓಣಿಯಲ್ಲಿ ನಡೆದಿದೆ.
ನಾಯಿಗಳ (Dog) ದಾಳಿಗೆ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಪುಟ್ಟ ಮಕ್ಕಳಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗೆ ಜಿಲ್ಲಾಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಪ್ರವಚನ ಮುಗಿಸಿ ಗುಂಪಾಗಿ ಹೋಗ್ತಿದ್ದ ವೇಳೆ ನಾಯಿಗಳು ಏಕಾಏಕಿ ದಾಳಿ ನಡೆಸಿವೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಆಟವಾಡುತ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ – 10 ಮಂದಿಗೆ ಗಂಭೀರ ಗಾಯ
ಪದೇ ಪದೇ ಇಂತಹ ದಾಳಿ ಆಗ್ತಿದ್ರೂ ಸ್ಥಳೀಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ದೆಹಲಿ | ಯಾವುದೇ ಕಾರಣಕ್ಕೂ ಚಿಕ್ಕ ಮಕ್ಕಳು ರೇಬಿಸ್‌ನಿಂದ ಸಾಯಬಾರದು: ಸುಪ್ರೀಂ ಕೋರ್ಟ್

