ಬಾಗಲಕೋಟೆ: ಇಸ್ರೆಲ್‍ನಲ್ಲಿರುವ (Israel) ರಬಕವಿ ಪಟ್ಟಣದ ಸಾಫ್ಟ್‌ವೇರ್ ಇಂಜಿನಿಯರ್ ಪೂಜಾ ಉಮದಿ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಧೈರ್ಯ ತುಂಬಿದ್ದಾರೆ.
ಸಚಿವ ಆರ್.ಬಿ ತಿಮ್ಮಾಪೂರ ಅವರ ಮನವಿ ಮೇರೆಗೆ ಫೋನ್‍ನಲ್ಲಿ ಸಂಭಾಷಣೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು ಕುಟುಂಬಸ್ಥರಿಗೆ ಧೈರ್ಯ ಹೇಳಿದ್ದಾರೆ. ಪೂಜಾ ಅವರೊಂದಿಗೆ ಮಾತನಾಡಿದ್ದೇನೆ, ಅವರು ಸುರಕ್ಷಿತವಾಗಿದ್ದಾರೆ. ನೀವು ಯಾವುದೇ ಆತಂಕಕ್ಕೊಳಗಾಗಬೇಡಿ ಎಂದು ಪೂಜಾ ಕುಟುಂಬಸ್ಥರಿಗೆ ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಗಾಂಧಿ ಕೊಂದ ವಿಚಾರ ಬಿಟ್ಟರೆ ಗೋಡ್ಸೆಯ ಹಿಂದುತ್ವದ ಆಲೋಚನೆಯನ್ನು ಸಂಭ್ರಮಿಸಬಹುದು: ಸೂಲಿಬೆಲೆ
Advertisement
Advertisement
ಪೂಜಾ ಹಾಗೂ ಅವರ ಕುಟುಂಬಸ್ಥರೊಂದಿಗೆ ಸಚಿವ ಆರ್.ಬಿ ತಿಮ್ಮಾಪೂರ ಮಾತುಕತೆ ನಡೆಸಿದ್ದಾರೆ. ಬಳಿಕ ಪೂಜಾ ಅವರೊಂದಿಗೆ ಮಾತನಾಡಿ, ಅಲ್ಲಿನ ಪರಿಸ್ಥಿತಿ ಹಾಗೂ ಸುರಕ್ಷತೆ ಬಗ್ಗೆ ಮಾಹಿತಿ ಪಡೆದರು. ನಂತರ ಕುಟುಂಬಸ್ಥರಿಗೆ ಧೈರ್ಯ ಹೇಳುವಂತೆ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಮನವಿ ಮಾಡಿದ್ದಾರೆ. ಈ ವೇಳೆ ಸ್ಪಂದಿಸಿದ ಸಿಎಂ ಪೂಜಾ ಕುಟುಂಬದವರೊಂದಿಗೆ ಮಾತುಕತೆ ನಡೆಸಿದ್ದಾರೆ.
Advertisement
Advertisement
ಜಿಲ್ಲೆಯ (Bagalkote) ರಬಕವಿಬನಹಟ್ಟಿ ತಾಲ್ಲೂಕಿನ ರಬಕವಿಯ ಪೂಜಾ ಅವರು ಕಳೆದ ಒಂದುವರೆ ವರ್ಷದಿಂದ ಇಸ್ರೇಲ್‍ನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಹಮಾಸ್ ಹಾಗೂ ಇಸ್ರೇಲ್ ನಡುವಿನ ಯುದ್ಧದಿಂದ ಅವರ ತಂದೆ ತಾಯಿ ಆತಂಕ ವ್ಯಕ್ತಪಡಿಸಿದ್ದರು. ಇದರಿಂದಾಗಿ ಸಚಿವರು ಅವರ ಬಳಿ ನೇರವಾಗಿ ಮಾತನಾಡಿ, ಸಿಎಂ ಜೊತೆ ಕೂಡ ಮಾತಾಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ರಾಜ್ಯದ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ: ಬಿ.ಸಿ.ಪಾಟೀಲ್
Web Stories