ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯಗೆ ಪ್ರತಿಷ್ಠೆಯಾಗಿರುವ ಜಮಖಂಡಿ ಉಪಚುನಾವಣೆ ವಿಷಯದಲ್ಲಿ ಕಾಂಗ್ರೆಸ್‍ನಲ್ಲಿ ಭಿನ್ನಮತ ಭುಗಿಲೆದ್ದಿದೆ.
ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡೋದಾಗಿ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಮುಖಂಡ ಸುಶೀಲ್ ಕುಮಾರ್ ಬೆಳಗಲಿ ಹೇಳಿದ್ದಾರೆ. ಶನಿವಾರ ಬೆಂಬಲಿಗರ ಸಭೆ ಮಾಡ್ತೇನೆ. ಒಂದು ವೇಳೆ ಬೆಂಬಲಿಗರು ಬಂಡಾಯ ಅಭ್ಯರ್ಥಿ ಆಗಿ ಸ್ಪರ್ಧೆ ಮಾಡಿ ಅಂದ್ರೆ ಎಲೆಕ್ಷನ್‍ಗೆ ನಿಲ್ಲುತ್ತೇನೆ ಅಂತ ಹೇಳಿದ್ದಾರೆ.
Advertisement
Advertisement
ನಮ್ಮ ತಂದೆ ಕಾಲದಿಂದಲೂ ಕಾಂಗ್ರೆಸ್‍ಗಾಗಿ ದುಡಿಯುತ್ತಾ ಬಂದಿದ್ದೆ. 2008, 2013ರಲ್ಲೂ ಟಿಕೆಟ್ ಕೇಳಿದ್ದೆ. ಆದ್ರೆ ಟಿಕೆಟ್ ನೀಡಿಲ್ಲ. ಇತ್ತ, ಸಚಿವ ಡಿಕೆಶಿವಕುಮಾರ್ ಮತ್ತು ಮಾಜಿ ಸಚಿವ ಎಂಬಿ ಪಾಟೀಲ್ ದುಡುಕಬೇಡಿ ಅಂತ ಹೇಳಿದ್ದಾರೆ. ಆದ್ರೆ ಬೆಂಬಲಿಗರ ನಿರ್ಧಾರಕ್ಕೆ ತಲೆಬಾಗಬೇಕಾಗುತ್ತೇನೆ ಅಂತ ಹೇಳಿದ್ದಾರೆ.
Advertisement
ಯಡಿಯೂರಪ್ಪ, ಶ್ರೀರಾಮುಲು, ಪುಟ್ಟರಾಜು ಅವರಿಂದ ತೆರವಾಗಿರುವ ಶಿವಮೊಗ್ಗ, ಬಳ್ಳಾರಿ, ಮಂಡ್ಯ ಕ್ಷೇತ್ರದ ಉಪಚುನಾವಣೆ ನವೆಂಬರ್ 3 ರಂದು ನಡೆಯಲಿದ್ದು, ನವೆಂಬರ್ 6 ರಂದು ಫಲಿತಾಂಶ ಪ್ರಕಟವಾಗಲಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv