Recent News

ಎಸ್‍ಎಸ್‍ಎಲ್‍ಸಿ ಫಲಿತಾಂಶ ಸಿಗದೇ ವಿದ್ಯಾರ್ಥಿಗಳ ಪರದಾಟ!

ಬಾಗಲಕೋಟೆ: ಎಸ್‍ಎಸ್‍ಎಲ್‍ಸಿ ಫಲಿತಾಂಶ ಬಂದು ಮೂರು ದಿನವಾದರೂ ಬಾಗಲಕೋಟೆ ಸರ್ಕಾರಿ ಆದರ್ಶ ಮಹಾವಿದ್ಯಾಲಯಕ್ಕೆ ಇನ್ನೂ ಫಲಿತಾಂಶ ಬಂದಿಲ್ಲ.

ಎಸ್‍ಎಸ್‍ಎಲ್‍ಸಿ ಬೋರ್ಡ್ ಎಡವಟ್ಟಿಗೆ ಫಲಿತಾಂಶ ಸಿಗದೇ ವಿದ್ಯಾರ್ಥಿಗಳ ಪರದಾಡುವಂತಾಗಿದೆ. ಬುಧವಾರ ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಿದ್ದು, ಆದರೆ ಬಾಗಲಕೋಟೆ ಸರ್ಕಾರಿ ಆದರ್ಶ ಮಹಾವಿದ್ಯಾಲಯ ಶಾಲೆಯ 35 ವಿದ್ಯಾರ್ಥಿಗಳಿಗೆ ವೆಬ್‍ಸೈಟ್‍ನಲ್ಲಿ ಫಲಿತಾಂಶ ಸಿಕ್ಕಿಲ್ಲ. ಶಾಲೆಯಲ್ಲಿ ಕೇಳಿದ್ದಾಗ ಅಲ್ಲಿಯೂ ಫಲಿತಾಂಶ ಬಂದಿಲ್ಲ.

ಒಟ್ಟು 56 ವಿದ್ಯಾರ್ಥಿಗಳಲ್ಲಿ 35 ವಿದ್ಯಾರ್ಥಿಗಳಿಗೆ ಫಲಿತಾಂಶ ಬಂದಿಲ್ಲ. ಈ ಬಗ್ಗೆ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಶಾಲೆಯ ಪ್ರಾಂಶುಪಾಲರನ್ನು ಕೇಳಿದ್ದಾಗ ಅವರು ವೆಬ್‍ಸೈಟ್‍ನಲ್ಲಿ ಏನೋ ತೊಂದರೆ ಆಗಿದೆ. ನಾನು ಅವರ ಬಳಿ ಮಾತನಾಡಿದ್ದೇನೆ. ಶೀಘ್ರದಲ್ಲೇ ಫಲಿತಾಂಶ ಬರಲಿದೆ ಎಂದು ಹೇಳಿದ್ದಾರೆ.

ತಮ್ಮ ಫಲಿತಾಂಶವನ್ನು ನೋಡಲು ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಶಾಲೆಯಲ್ಲಿ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಆದರೆ ಈಗ ಫಲಿತಾಂಶ ಬರುತ್ತೆ, ಈಗ ಫಲಿತಾಂಶ ಬರುತ್ತೆ ಎಂದು ಎಸ್‍ಎಸ್‍ಎಲ್‍ಸಿ ಬೋರ್ಡ್ ವಿದ್ಯಾರ್ಥಿಗಳನ್ನು ಸತಾಯಿಸುತ್ತಿದೆ.

ಮಾರ್ಚ್ 21 ರಿಂದ ಏಪ್ರಿಲ್ 24ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು. ರಾಜ್ಯಾದ್ಯಂತ 2,847 ಕೇಂದ್ರಗಳಲ್ಲಿ ಒಟ್ಟು 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ರಾಜ್ಯಾದ್ಯಂತ 2,857 ಪರೀಕ್ಷೆ ಕೇಂದ್ರಗಳಲ್ಲಿ, 46 ಸೂಕ್ಷ್ಮ ಕೇಂದ್ರಗಳು ಮತ್ತು 7 ಅತಿ ಸೂಕ್ಷ್ಮ ಕೇಂದ್ರಗಳ ಎಂದು ವಿಂಗಡಿಸಲಾಗಿತ್ತು.

Leave a Reply

Your email address will not be published. Required fields are marked *