ಚಿಕ್ಕಬಳ್ಳಾಪುರ: ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಇಂದು ನಿಧನರಾಗಿದ್ದಾರೆ. ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ ಜಿ ವಿ ಶ್ರೀರಾಮರೆಡ್ಡಿಯವರು ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
Advertisement
ಇವರು ಸಿಪಿಐಎಂ ಪಕ್ಷದಿಂದ ಶಾಸಕರಾಗಿದ್ದರು. ಸಿಪಿಐಎಂ ಪಕ್ಷದಿಂದ ಉಚ್ಛಾಟಿತರಾದ ನಂತರ ಪ್ರಜಾ ಸಂಘರ್ಷ ಸಮಿತಿ ಪಕ್ಷ ಸ್ಥಾಪನೆ ಮಾಡಿದ್ದರು. ಸದ್ಯ ಶ್ರೀರಾಮರೆಡ್ಡಿ ನಿಧನಕ್ಕೆ ಅಪಾರ ಪ್ರಮಾಣದ ಬೆಂಬಲಿಗರ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: RSS ಆಸ್ಪತ್ರೆ ಹಿಂದೂಗಳಿಗೆ ಮಾತ್ರವೇ ಎಂಬ ರತನ್ ಟಾಟಾ ಪ್ರಶ್ನೆಗೆ ಗಡ್ಕರಿ ಉತ್ತರ ಹೀಗಿತ್ತು
Advertisement
Advertisement
ಈ ಸಂಬಂಧ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಭಗವಂತ ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಅವರ ಕುಟುಂಬ ಸದಸ್ಯರು ಹಾಗೂ ಬಂಧು-ಬಳಗಕ್ಕೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
Advertisement
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ.
ಭಗವಂತ ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಅವರ ಕುಟುಂಬ ಸದಸ್ಯರು ಹಾಗೂ ಬಂಧು-ಬಳಗಕ್ಕೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. pic.twitter.com/BGMeS57GCa
— Dr Sudhakar K (@mla_sudhakar) April 15, 2022