ಚಿಕ್ಕಮಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ (Congress) ನವೆಂಬರ್ ಕ್ರಾಂತಿ ಬಿರುಗಾಳಿ ಜೋರಾಗ್ತಿದೆ. ಈಚೆಗೆ ಡಿಕೆಶಿ ಮುಂದಿನ ಸಿಎಂ ಆಗಬೇಕೆಂದು ಬಿಹಾರಿ ಮತದಾರರಿಂದ ಕೂಗು ಕೇಳಿಬಂದ ಬೆನ್ನಲ್ಲೇ ಸಿಎಂ ಗರಂ ಆಗಿದ್ದರು. ಇಷ್ಟುದಿನ ತಾಳ್ಮೆಯಿಂದ.. ನಗುನಗುತ್ತಲೇ ಉತ್ತರಿಸುತ್ತಿದ್ದ ಸಿಎಂ ಹೈಕಮಾಂಡ್ ಹೇಳಿದ್ದಷ್ಟೇ ಫೈನಲ್ ಅಂತ ಗುಡುಗಿದ್ದರು. ಈ ಬೆನ್ನಲ್ಲೇ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಗ್ಗುಂಜಿ ಮಠದ (Baggunji Mutt) ವೆಂಕಟೇಶ ಗುರೂಜಿ ಭವಿಷ್ಯ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಡಿಕೆಶಿ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ನವೆಂಬರ್ 26ರ ಬಳಿಕ ಡಿ.ಕೆ ಶಿವಕುಮಾರ್ (DK Shivakumar) ಸಿಎಂ ಆಗೋದನ್ನ ಯಾರೂ ತಡೆಯೋಕಾಗಲ್ಲ ಅಂತ ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ವರ್ತೂರು ಪೊಲೀಸರಿಂದ ಮನೆ ಕೆಲಸದಾಕೆ ಮೇಲೆ ಹಲ್ಲೆ ಕೇಸ್; ಕಮಿಷನರ್‌ಗೆ ತುರ್ತು ವರದಿ ಕೇಳಿದ ಪರಮೇಶ್ವರ್
ಸಿಎಂ ಆದ್ರೂ ಒಂದೂವರೆ ವರ್ಷ ಅಷ್ಟೇ
ʻಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿರುವ ಅವರು, ನವೆಂಬರ್ 26ರ ಬಳಿಕ ಡಿಕೆಶಿ ಸಿಎಂ ಆಗೋದ್ನ ಯಾರೂ ತಡೆಯಲಾಗದು. ಡಿಕೆಶಿ ಸಿಎಂ ಆದ್ರೂ ಕೇವಲ ಒಂದೂವರೆ ವರ್ಷ ಅಷ್ಟೆ ಅಧಿಕಾರ ಮಾಡೋದು ಅಂತ ಹೇಳಿದ್ದಾರೆ. ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ 3.1 ತೀವ್ರತೆಯ ಭೂಕಂಪನ ಅನುಭವ – 2 ತಿಂಗಳಲ್ಲಿ 13 ಬಾರಿ ಕಂಪಿಸಿದ ಭೂಮಿ
ಡಿಕೆ ಶಿವಕುಮಾರ್ ಅವರಿಗೆ ಸಿಎಂ ಯೋಗ ಇದೆ, ಆಗೇ ಆಗ್ತಾರೆ. 2031ರ ವರೆಗೆ ರಾಜನಂತೆ ಇರ್ತಾರೆ. ಏಕೆಂದ್ರೆ ಡಿಕೆಶಿ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ಈ ಯೋಗ ಎಲ್ಲರಿಗೂ ಇರಲ್ಲ, ಅವರ ಜಾತಕದಲ್ಲಿ ಇದೆ. ಹಾಗಾಗಿ ಸಿಎಂ ಆಗೇ ಆಗ್ತಾರೆ. ಒಂದೂವರೆ ವರ್ಷದ ಹಿಂದೆಯೇ ಅವರಿಗೆ ಹೇಳಿ ಮಂತ್ರಾಕ್ಷತೆ ಕೊಟ್ಟಿದ್ದೇನೆ. ಅವರಿಗೆ ಮುಖ್ಯಮಂತ್ರಿ ಯೋಗ ಇದೆ, ಅದನ್ನ ಯಾರೂ ತಪ್ಪಿಸಲು ಆಗಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಎಂಜಿನಿಯರ್‌ಗಳಿಗೆ ಅನಧಿಕೃತ ಕಟ್ಟಡ ತೆರವು ಟಾರ್ಗೆಟ್ – ವಾರಕ್ಕೆ ಒಂದು ಕಡೆಯಂತೆ 8 ವಿಭಾಗದಿಂದ ತೆರವು ಆಪರೇಷನ್


