Connect with us

Crime

ತಿರುವಿನಲ್ಲಿ ವಾಹನಗಳ ನಡುವೆ ಡಿಕ್ಕಿ- 6 ಸಾವು, 10 ಜನ ಗಂಭೀರ

Published

on

– ಮುಖಾಮುಖಿ ಡಿಕ್ಕಿಯಾದ ವಾಹನಗಳು

ಲಕ್ನೋ: ಹೆದ್ದಾರಿಯ ತಿರುವಿನಲ್ಲಿ ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಬಾಹರೈಚ್ ಬಳಿ ಯ ಪ್ರಯಾಗಪುರನಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಇಂದು ಬೆಳಗ್ಗೆ ಗೋಂಡಾ- ಬಾಹರೈಚ್ ಮಾರ್ಗದಲ್ಲಿ ಅಪಘಾತ ನಡೆದಿದೆ. ಪ್ರಯಾಣಿಕರೆಲ್ಲರೂ ಅಂಬೇಡ್ಕರ್ ನಗರದ ನಿವಾಸಿಗಳಾಗಿದ್ದು, ಕಿಛೌಚಾ ದರ್ಗಾದಿಂದ ಲಖೀಮಪುರಕ್ಕೆ ಹೊರಟಿದ್ದರು ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನ ಸ್ಥಳೀಯರು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ತೆರಳಿರುವ ಪೊಲೀಸರು ಎರಡು ವಾಹನಗಳನ್ನು ತೆರವುಗೊಳಿಸಿದ್ದಾರೆ. ಚಳಿಗಾಲ ಆರಂಭವಾಗಿದ್ದು, ಬೆಳಗಿನ ಜಾವ ಮಂಜು ಆವರಿಸಿದ್ದರಿಂದ ಅಪಘಾತ ಸಂಭವಿಸಿರುವ ಸಾಧ್ಯತೆಗಳಿವೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

 

Click to comment

Leave a Reply

Your email address will not be published. Required fields are marked *