ಹೈದರಾಬಾದ್: ಸದ್ಯ ಲಾಕ್‍ಡೌನ್‍ನಿಂದ ಸಿನಿಮಾಗಳಿಗೆ ಬ್ರೇಕ್ ಕೊಟ್ಟಿರುವ ಬಾಹುಬಲಿ ನಿರ್ದೇಶಕ ಎಸ್. ಎಸ್ ರಾಜಮೌಳಿ ಅವರು ಮನೆಯಲ್ಲಿ ಏನು ಮಾಡುತ್ತಿದ್ದಾರೆ ಎನ್ನುವ ಸ್ಪೆಷಲ್ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
‘ಬಾಹುಬಲಿ’ಯಂತಹ ಸರಣಿ ಹಿಟ್ ಸಿನಿಮಾ ಕೊಟ್ಟ ನಿರ್ದೇಶಕ ರಾಜಮೌಳಿ ಸದ್ಯ ಮನೆಯಲ್ಲಿ ಕೆಲಸ ಮಾಡೋದ್ರಲ್ಲಿ ಬ್ಯುಸಿಯಾಗಿದ್ದಾರೆ. ಮನೆಯಲ್ಲಿ ಕಸ ಗುಡಿಸುತ್ತಾ, ಕಿಟಕಿ ಕ್ಲೀನ್ ಮಾಡುತ್ತಿರುವ ವಿಡಿಯೋವನ್ನು ತಮ್ಮ ಟ್ವಿಟರ್ ನಲ್ಲಿ ರಾಜಮೌಳಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದ್ದು, ಸಿನಿಮಾ ಮಾತ್ರವಲ್ಲ ಮನೆ ಕೆಲಸವನ್ನೂ ಚೆನ್ನಾಗೆ ಮಾಡ್ತೀರಾ ಸಾರ್ ಎಂದು ನೆಟ್ಟಿಗರು ರಾಜಮೌಳಿ ಟ್ವೀಟ್‍ಗೆ ಕಮೆಂಟ್ ಮಾಡಿ ಕಾಲೆಳೆದಿದ್ದಾರೆ.
Advertisement
Task done, @imvangasandeep. Throwing the challenge to @tarak9999 and @AlwaysRamCharan..
And lets have some moooreee fun..
Am also challenging @Shobu_ garu, sukku @aryasukku and peddanna @mmkeeravaani..???????? #BetheREALMAN pic.twitter.com/DepkfDvzIE
— rajamouli ss (@ssrajamouli) April 20, 2020
Advertisement
ನಿರ್ದೇಶಕ ಹಾಗೂ ನಿರ್ಮಾಪಕ ಸಂದೀಪ್ ವಂಗಾ ಲಾಕ್‍ಡೌನ್ ಸಮಯದಲ್ಲಿ ಮನೆಯಲ್ಲಿ ಕೆಲಸ ಮಾಡುವ ವಿಡಿಯೋವೊಂದನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಕೇಲವ ವಿಡಿಯೋ ಪೊಲೀಸ್ ಮಾಡೋದಲ್ಲದೇ #BetheREALMAN ಅಂತ ಸೆಲೆಬ್ರಿಟಿಗಳಿಗೆ ಚಾಲೆಂಜ್ ಕೂಡ ಮಾಡಿದ್ದಾರೆ. ಮನೆ ಕೆಲಸದವರು ಇಲ್ಲದಿದ್ದಾಗ ಮಹಿಳೆಯರಿಗೆ ಮನೆ ಕೆಲಸದಲ್ಲಿ ಸಹಾಯ ಮಾಡಿ ರಿಯಲ್ ಮ್ಯಾನ್ ಆಗಿ ಎಂದು ಸಂದೀಪ್ ರಾಜಮೌಳಿ ಅವರನ್ನು ಟ್ಯಾಗ್ ಮಾಡಿ, ಚಾಲೆಂಜ್ ಹಾಕಿದ್ದರು.
Advertisement
Man can be a great domestic worker and a real man will never let his woman work all by herself specially during this No maid times & Quarantine.
Please help in domestic work ????????????#BetheREALMAN
I request @ssrajamouli sir to pass it on and inspire more by uploading a video 🙂 pic.twitter.com/Cqmq4xfRm7
— Sandeep Reddy Vanga (@imvangasandeep) April 19, 2020
Advertisement
ಈ ಸವಾಲನ್ನು ಸ್ವೀಕರಿಸಿದ ರಾಜಮೌಳಿ ತಮ್ಮ ಮನೆ ಕೆಲಸ ಮಾಡಿ ರಿಯಲ್ ಮ್ಯಾನ್ ಆಗಿದ್ದಾರೆ. ಅಷ್ಟೇ ಅಲ್ಲದೇ ಮನೆ ಕೆಲಸ ಮಾಡುತ್ತಿರುವ ವಿಡಿಯೋ ಪೋಸ್ಟ್ ಮಾಡಿ, ಜೂನಿಯರ್ ಎನ್‍ಟಿಆರ್, ರಾಮ್ ಚರಣ್ ಹಾಗೂ ಎಂಎಂ ಕೀರವಾಣಿ ಅವರಿಗೂ ಚಾಲೆಂಜ್ ಪಾಸ್ ಮಾಡಿದ್ದಾರೆ.
ಲಾಕ್‍ಡೌನ್‍ಗೂ ಮುನ್ನ ಟಾಲಿವುಡ್‍ನ ಬಹುನಿರೀಕ್ಷಿತ ಸಿನಿಮಾ ‘ಆರ್‌ಆರ್‌ಆರ್’ ಚಿತ್ರೀಕರಣದಲ್ಲಿ ರಾಜಮೌಳಿ ಅವರು ಬ್ಯುಸಿಯಾಗಿದ್ದರು. ರಾಮ್ ಚರಣ್ ಹಾಗೂ ಜೂನಿಯರ್ ಎನ್‍ಟಿಆರ್ ಜೊತೆಗೆ ಬಾಲಿವುಡ್ ತಾರೆಯರು ಈ ಚಿತ್ರದಲ್ಲಿ ಬಣ್ಣ ಹಚ್ಚಲಿದ್ದು, ಲಾಕ್‍ಡೌನ್‍ನಿಂದಾಗಿ ಶೂಟಿಂಗ್ ಕೆಲಸ ಸ್ಥಗಿತಗೊಂಡಿದೆ.