ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗ್ಯಾಂಗ್‌ನ (Darshan Gang) ಮತ್ತಿಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು (Bail application) 57ನೇ ಸಿಸಿಹೆಚ್ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.
ದರ್ಶನ್ ಗ್ಯಾಂಗ್‌ನ ಎ16 ಆರೋಪಿ ಕೇಶವಮೂರ್ತಿ ಮತ್ತು ಎ10 ಆರೋಪಿ ವಿನಯ್ ಜಾಮೀನು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ 57ನೇ ಸಿಸಿಹೆಚ್ ನ್ಯಾಯಾಲಯ (CCH Court) ತಿರಸ್ಕರಿಸಿ ಆದೇಶಿಸಿದೆ. ಎರಡು ದಿನಗಳ ಹಿಂದೆಯಷ್ಟೇ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಮತ್ತು ಎ7 ಆರೋಪಿ ಅನುಕುಮಾರ್ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಇದನ್ನೂ ಓದಿ: Kolkata Horror | ಟ್ರೈನಿ ವೈದ್ಯೆ ʻಹತ್ಯಾʼಚಾರ ನಡೆದಿದ್ದ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅರೆಸ್ಟ್
Advertisement
Advertisement
ಎ10 ಆರೋಪಿ ಆಗಿರುವ ವಿನಯ್ ಪಾತ್ರದ ಸಂಬಂಧ ಸಾಕ್ಷಿ ಇದೆ. ಸಿಆರ್‌ಪಿಸಿ 164 ಅಡಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಜಾಮೀನು ನೀಡಿದಲ್ಲಿ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಪ್ರಕರಣ ಇನ್ನೂ ತನಿಖೆ ಹಂತದಲ್ಲಿ ಇರುವುದರಿಂದ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ತಿರಸ್ಕರಿದೆ. ಇದನ್ನೂ ಓದಿ: Breaking: ಮುಡಾ ಹಗರಣದ ಮೊದಲ ವಿಕೆಟ್ ಪತನ – ಹಿಂದಿನ ಆಯುಕ್ತ ದಿನೇಶ್ ಕುಮಾರ್ ಸಸ್ಪೆಂಡ್!
Advertisement
Advertisement
ʻದಾಸʼನಿಗೆ ಸರ್ಜಿಕಲ್ ಚೇರ್ ಭಾಗ್ಯ:
ಬಳ್ಳಾರಿ ಜೈಲಲ್ಲಿರುವ ವಿಚಾರಣಾಧೀನ ಕೈದಿ, ನಟ ದರ್ಶನ್‌ಗೆ ಸರ್ಜಿಕಲ್ ಚೇರ್ ಬಳಸಲು ಕಾರಗೃಹ ಡಿಐಜಿ ಅನುಮತಿ ನೀಡಿದ್ದಾರೆ. ದರ್ಶನ್ ಆರೋಗ್ಯ ಕುರಿತಾಗಿ ವೈದ್ಯರು ನೀಡಿದ ವರದಿಗಳನ್ನು ಕೂಲಂಕಶವಾಗಿ ಪರಿಶೀಲಿಸಿದ ಡಿಐಜಿ, ಸರ್ಜಿಕಲ್ ಚೇರ್ ಬಳಕೆಗೆ ಸಮ್ಮತಿ ನೀಡಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದರ್ಶನ್‌ಗೆ ಸರ್ಜಿಕಲ್ ಚೇರ್ ತಲುಪಿಸಿದೆ. ಇನ್ನು, ಹೈ-ಸೆಕ್ಯೂರಿಟಿ ಸೆಲ್‌ನಲ್ಲಿ ಇರುವ ಕಾರಣ ದರ್ಶನ್‌ಗೆ ಇತರೆ ಕೈದಿಗಳನ್ನು ಸಂಪರ್ಕ ಸಾಧ್ಯವಾಗ್ತಿಲ್ಲ. ಬೆಳಗ್ಗೆ ಮತ್ತು ಸಂಜೆ ಮಾತ್ರ ವಾಕಿಂಗ್‌ಗೆಂದು ಸೆಲ್‌ನಿಂದ ಹೊರಗೆ ಕರೆದೊಯ್ಯಲಾಗ್ತಿದೆ. ದರ್ಶನ್ ಮೇಲೆ ನಿಗಾ ಇಡಲು, ಅವರನ್ನು ಇರಿಸಲಾಗಿರುವ ಸೆಲ್‌ಗೆ 3 ಸಿಸಿಟಿವಿ ಕೆಮರಾ ಅಳವಡಿಸಲಾಗಿದೆ. ಇದನ್ನೂ ಓದಿ: ಬೇಬಿ ಬಂಪ್ ಫೋಟೋ ಶೂಟ್‌ಗೆ ದೀಪಿಕಾ-ರಣವೀರ್ ಪೋಸ್; ಬಾಲಿವುಡ್‌ನ ಕ್ಯೂಟ್ ಕಪಲ್ ಫುಲ್ ಶೈನ್