ನವದೆಹಲಿ: ದೆಹಲಿ ವಕ್ಫ್ ಬೋರ್ಡ್ ( Delhi Waqf Board) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಆಮ್ ಆದ್ಮಿ ಪಕ್ಷದ (AAP) ಶಾಸಕ ಅಮಾನತುಲ್ಲಾ ಖಾನ್‌ಗೆ (Amanatullah Khan) ಬಿಗ್ ರಿಲೀಫ್ ಸಿಕ್ಕಿದೆ. ಅಮಾನತುಲ್ಲಾ ಖಾನ್ ವಿರುದ್ಧ ದಾಖಲಾಗಿದ್ದ ಇ.ಡಿ (E.D) ಪ್ರಕರಣದಲ್ಲಿ ದೆಹಲಿ ರೋಸ್ ಅವೆನ್ಯೂ ಕೋರ್ಟ್ ಜಾಮೀನು (Bail) ಮಂಜೂರು ಮಾಡಿದೆ. ಇಂದು ಜಾಮೀನು ನೀಡಿದ ಕೋರ್ಟ್ 15,000 ರೂ. ವೈಯಕ್ತಿಕ ಬಾಂಡ್ ನೀಡುವಂತೆ ಸೂಚಿಸಿದೆ.
ಅಮಾನತುಲ್ಲಾ ಖಾನ್ ದೆಹಲಿ ವಕ್ಫ್ ಬೋರ್ಡ್ ಅಧ್ಯಕ್ಷರಾಗಿದ್ದಾಗ ಅಕ್ರಮ ಹಣ ವರ್ಗಾವಣೆ ನಡೆದಿದೆ. ವಕ್ಫ್ ಮಂಡಳಿಯ ಹಲವು ಆಸ್ತಿಗಳನ್ನು ಅಕ್ರಮವಾಗಿ ಬಾಡಿಗೆಗೆ ನೀಡಲಾಗಿದೆ. ದೆಹಲಿ ಸರ್ಕಾರದಿಂದ ಸಹಾಯಧನ ಸೇರಿದಂತೆ ಮಂಡಳಿಯು ವಿವಿಧ ಅನುದಾನ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಲಾಗಿತ್ತು. ಇದನ್ನೂ ಓದಿ: ಪುಲ್ವಾಮಾ ದಾಳಿಯಲ್ಲಿ ಸೈನಿಕರು ಸತ್ತಾಗ ಮಂಗಳಸೂತ್ರ ಕಿತ್ತುಕೊಂಡಿದ್ಯಾರು: ಬಿ.ಕೆ ಹರಿಪ್ರಸಾದ್ ಪ್ರಶ್ನೆ
ಈ ಆರೋಪಗಳ ಬೆನ್ನಲ್ಲೇ ದೂರು ದಾಖಲಿಸಿಕೊಂಡಿದ್ದ ಇ.ಡಿ ವಿಚಾರಣೆಗೆ ಹಾಜರಾಗುವಂತೆ ಅಮಾನತುಲ್ಲಾ ಖಾನ್‌ಗೆ ಸಮನ್ಸ್ ಜಾರಿ ಮಾಡಿತ್ತು. ವಿಚಾರಣೆಗೆ ಹಾಜರಾಗದ ಅಮಾನತುಲ್ಲಾ ಖಾನ್ ತಮ್ಮ ವಿರುದ್ಧ ದಾಖಲಾದ ಪ್ರಕರಣವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ನಾನು ಸಕ್ರಿಯ ರಾಜಕಾರಣಕ್ಕೆ ಬರಬೇಕೆಂಬುದು ದೇಶದ ಕರೆಯಾಗಿದೆ: ರಾಬರ್ಟ್ ವಾದ್ರಾ