ನವದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ ದೊರೆತ ಶಿವಲಿಂಗದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕನಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 50,000 ರೂ. ಬಾಂಡ್ ನೀಡಿದ ಬಳಿಕ ಪ್ರಾಧ್ಯಾಪಕ ಜಾಮೀನಿನ ಮೇಲೆ ಹೊರಬರಬಹುದು ಎಂದಿದೆ.
ಪ್ರಾಧ್ಯಾಪಕ ರತನ್ ಲಾಲ್ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬಂದ ಶಿವಲಿಂಗದ ಬಗ್ಗೆ ಅವಹೇಳನಕಾರಿ ಕಾಮೆಂಟ್ಗಳನ್ನು ಮಾಡಿದ್ದ. ಈ ಹಿನ್ನೆಲೆಯಲ್ಲಿ ದೆಹಲಿ ಮೂಲದ ವಕೀಲ ವಿನೀತ್ ಜಿಂದಾಲ್ ಮಂಗಳವಾರ ರತನ್ ಲಾಲ್ ವಿರುದ್ಧ ದೂರು ನೀಡಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಇದನ್ನೂ ಓದಿ: 12 ಜ್ಯೋತಿರ್ಲಿಂಗಗಳಲ್ಲಿ ಜ್ಞಾನವಾಪಿಯಲ್ಲಿ ಸಿಕ್ಕ ಶಿವಲಿಂಗವೂ ಒಂದು: ವಿಹೆಚ್ಪಿ
Advertisement
Advertisement
ರತನ್ ಲಾಲ್ನನ್ನು ಶುಕ್ರವಾರ ರಾತ್ರಿ ಪೊಲೀಸರು ಬಂಧಿಸಿದ್ದರು. ಬಳಿಕ ರತನ್ ಲಾಲ್ ಜಾಮೀನು ಹಾಗೂ ರಕ್ಷಣೆಯನ್ನು ಕೋರಿ ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ದೆಹಲಿ ನ್ಯಾಯಾಲಯ 50,000 ರೂ. ಬಾಂಡ್ ವಿಧಿಸಿ, ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ನ್ಯೂಸ್ – ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಇಳಿಕೆ
Advertisement
Advertisement
ರತನ್ ಲಾಲ್ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡಸAಹಿತೆ 153ಎ(ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಹಾಗೂ ಸೌಹಾರ್ದದ ಮೇಲೆ ಪರಿಣಾಮ ಬೀರುವ ಕೃತ್ಯಗಳು) ಹಾಗೂ 295ಎ(ಉದ್ದೇಶಪೂರ್ವಕವಾಗಿ ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಮೂಲಕ ಅವರ ಧಾಮಿಕ ಭಾವನೆಯನ್ನು ಉದ್ರೇಕಿಸುವುದು) ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.