ಸೋನುಗೆ ಜಾಮೀನು: ಇಂದು ಜೈಲಿನಿಂದ ಬಿಡುಗಡೆ

Public TV
1 Min Read
Sonu Srinivas Gowda 2

ರೀಲ್ಸ್ ರಾಣಿ, ಮಾಜಿ ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಜಾಮೀನು ಮಂಜೂರಾಗಿತ್ತು. ಪಿಡಿಜೆ ಕೋರ್ಟ್ ನಿಂದ ಇಬ್ಬರು ಶ್ಯೂರಿಟಿ ಹಾಗೂ ಒಂದು ಲಕ್ಷ ರೂಪಾಯಿ ಬಾಂಡ್ ನೀಡಲು ಸೂಚಿಸಿ, ಷರತ್ತು ಬದ್ಧ ಜಾಮೀನು ನೀಡಿತ್ತು. ಹಾಗಾಗಿ ಜೈಲಿನಿಂದ ಇಂದು ಸೋನು ಬಿಡುಗಡೆ  (Released)ಆಗಲಿದ್ದಾರೆ.

Sonu Srinivas Gowda 1

ಅಕ್ರಮವಾಗಿ ಮಗುವನ್ನು ಮನೆಯಲ್ಲಿಟ್ಟುಕೊಂಡಿರುವ ಆರೋಪದ ಮೇಲೆ ಬಂಧನವಾಗಿದ್ದ (Arrest) ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಪೊಲೀಸ್ ಠಾಣೆಯಲ್ಲಿ ಗೋಳಾಡಿದ್ದರು. ಮಗುವನ್ನು ಕರೆದುಕೊಂಡು ಬಂದಿರುವ ವಿಷಯದಲ್ಲಿ ನನ್ನಿಂದ ಯಾವುದೇ ತಪ್ಪು ಆಗಿಲ್ಲವೆಂದು ಹೇಳಿಕೊಂಡಿದ್ದರು.

sonu srinivas gowda copy

ಮಗುವನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡಿರುವ ವಿಚಾರವಾಗಿ ದೂರು ದಾಖಲಿಸಿಕೊಂಡಿದ್ದ ಬ್ಯಾಡರಹಳ್ಳಿ ಪೊಲೀಸರು ಮಾರ್ಚ್ 22ರಂದು ಬಂಧಿಸಿದ್ದರು. ಪೊಲೀಸರು ಹಾಗೂ CWC ಅಧಿಕಾರಿಗಳಿಂದ ಸೋನು ವಿಚಾರಣೆ ನಡೆದಿತ್ತು.

 

ನಾನು ಮಗು ಕರೆದುಕೊಂಡು ಬಂದು  15 ದಿನ ಆಗಿದೆ. ಹಾಗೆ ಕರೆದುಕೊಂಡು ಬಂದಿರುವುದು ತಪ್ಪಾಗಿರುತ್ತೆ ಅಂತ ನನಗೆ ಗೊತ್ತಿಲ್ಲ. ಗೊತ್ತಿದ್ದರೆ, ನಾನು ಪ್ರೊಸಿಜರ್ ಮೂಲಕವೇ ದತ್ತು ಮಾಡಿಸಿಕೊಳ್ಳುತ್ತಿದ್ದೆ. ನಾನು ತಪ್ಪು ಮಾಡದಿದ್ರೂ ನನ್ನನ್ನ ಕರೆದುಕೊಂಡು ಬಂದಿದ್ದಾರೆ ಎಂದು ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡಿದ್ದರು ಸೋನು. ಕೊನೆಗೆ ಅವರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದರು. ನಂತರ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

Share This Article