ಹಾವೇರಿ: ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ವೇಳೆ ಮೂವರು ಮಂದಿಯ ಪ್ಯಾಂಟ್‍ಗೆ ಬೆಂಕಿ ಕಿಡಿ ತಗುಲಿದ ಘಟನೆ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ನಡೆದಿದೆ.
Advertisement
ರಾಜಸ್ಥಾನದ ಉದಯಪುರದಲ್ಲಿ ಮಂಗಳವಾರ ಹಾಡಹಗಲೇ ನಡೆದ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಹಾವೇರಿಯಲ್ಲಿ ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಟೈರ್ ಸುಡಲು ಅವಕಾಶ ನೀಡದ್ದಕ್ಕೆ ಪೊಲೀಸರ ಜೊತೆ ಕಾರ್ಯಕರ್ತರ ವಾಗ್ವಾದ ನಡೆಸಿದರು. ಇಂದಿನಿಂದ ಪಂಜಾಬ್ ಪ್ರತಿಮನೆಗೂ 300 ಯೂನಿಟ್ ಉಚಿತ ವಿದ್ಯುತ್ ಪೂರೈಕೆ: ಭಗವಂತ್ ಮಾನ್
Advertisement
Advertisement
ಕಾರ್ಯಕರ್ತರು ತಂದಿಟ್ಟ ಟೈರ್‌ಗಳನ್ನು ಪೊಲೀಸರು ವಾಪಸ್ಸ್ ಕಳಿಸಿದರು. ಪೊಲೀಸರ ವಿರೋಧದ ನಡುವೆಯೂ ಟೈರ್‌ಗೆ ಬೆಂಕಿ ಹಚ್ಚಿದ ನಂತರ ಮೂವರು ಕಾರ್ಯಕರ್ತರ ಪ್ಯಾಂಟಿಗೆ ಬೆಂಕಿಯ ಕಿಡಿ ಹತ್ತಿಕೊಂಡಿದೆ. ಪ್ಯಾಂಟ್‍ಗಳಿಗೆ ಬೆಂಕಿ ಹತ್ತಿದ್ದನ್ನು ಗಮನಿಸಿ ತಕ್ಷಣವೇ ಬೆಂಕಿಯನ್ನು ಕಾರ್ಯಕರ್ತರು ಆರಿಸಿದ್ದಾರೆ. ಪ್ರತಿಭಟನೆಯಲ್ಲಿ ಭಾರೀ ಅನಾಹುತ ತಪ್ಪಿದೆ. ಎರಡು ತಿಂಗಳ ಹಿಂದೆಯೇ ತಾಯಿಯಾಗಿದ್ದ ಆಲಿಯಾ ಭಟ್!