ಬೆಂಗಳೂರು: ಚುನಾವಣೆಗೆ ಕೇವಲ ಒಂದು ವಾರ ಬಾಕಿ ಇರುವಾಗ ರಾಜ್ಯ ಕಾಂಗ್ರೆಸ್ ಬಜರಂಗದಳವನ್ನು (Bajrang Dal) ನಿಷೇಧಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ (Manifesto) ಹಾಕಿ ವಿವಾದಕ್ಕೆ ಸಿಲುಕಿದೆ. ಆದರೆ ಕಾಂಗ್ರೆಸ್ (Congress) ಪ್ರಣಾಳಿಕೆ ಸಮಿತಿ ಮುಖ್ಯಸ್ಥ ಪರಮೇಶ್ವರ್ (Parameshwar) ನೇತೃತ್ವದಲ್ಲಿ ಈ ವಿಚಾರ ತೀರ್ಮಾನ ಆಗಿರಲಿಲ್ಲ ಎಂಬ ವಿಚಾರ ಈಗ ತಿಳಿದು ಬಂದಿದೆ.
“ಮತೀಯ ಚಟುವಟಿಕೆ ನಡೆಸುವ ಸಂಘಟನೆಗಳನ್ನು ನಿಷೇಧ ಮಾಡಲಾಗುವುದು” ಎಂಬ ಘೋಷಣೆಗೆ ಕಾಂಗ್ರೆಸ್ ಮುಂದಾಗಿತ್ತು. ಮತೀಯ ಸಂಘಟನೆ ವಿಚಾರದಲ್ಲಿ ಸ್ಪಷ್ಟತೆ ಇರಬೇಕು. ಅದು ಯಾವ ಧರ್ಮವಾದರೂ ಆಗಲಿ ಅದನ್ನು ಹೇಳೋಣ ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
Advertisement
Advertisement
ಸಿದ್ದರಾಮಯ್ಯನವರ (Siddaramaiah) ಈ ನಿಲುವನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ (Surjewala) ಸಮರ್ಥಿಸುವ ಮೂಲಕ ಹೆಸರು ಪ್ರಸ್ತಾಪಕ್ಕೆ ಮುಂದಾದರು ಎನ್ನಲಾಗಿದೆ. ಕೊನೆ ಕ್ಷಣದಲ್ಲಿ ಇವರ ಮಾತನ್ನು ಒಪ್ಪಿದ ಪ್ರಣಾಳಿಕೆ ಸಮಿತಿ ಪಿಎಫ್‍ಐ, ಭಜರಂಗದಳದ ಹೆಸರನ್ನು ಪ್ರಸ್ತಾಪಿಸಿದೆ. ಇದನ್ನೂ ಓದಿ: ಭಯೋತ್ಪಾದನೆಗೆ ಉತ್ತೇಜನ ಕೊಟ್ರೆ, PFI, ಬಜರಂಗದಳ ಆದ್ರೂ ಬ್ಯಾನ್ ಮಾಡಲಾಗುತ್ತೆ: ಬಿ.ಕೆ ಹರಿಪ್ರಸಾದ್
Advertisement
ಸೈದ್ದಾಂತಿಕ ಸ್ಪಷ್ಟತೆ ತೋರಿಸಲು ಹೋಗಿ ವಿವಾದ ಮೈ ಮೇಲೆ ಎಳೆದುಕೊಂಡ ಕಾಂಗ್ರೆಸ್ ಈಗ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಸೈದ್ದಾಂತಿಕ ಸ್ಪಷ್ಟತೆ ಇರಬೇಕು ಎಂಬ ಸಿದ್ದರಾಮಯ್ಯ ನಡೆಯೇ ಬಜರಂಗದಳ ವಿವಾದಕ್ಕೆ ಮೂಲವಾಯ್ತಾ? ಚಟುವಟಿಕೆ ಆಧಾರವಾಗಿ ಮತೀಯ ಸಂಘಟನೆಗಳ ನಿಷೇಧ ಬಗ್ಗೆ ಪ್ರಸ್ತಾಪಿಸಿದ್ದ ಪರಮೇಶ್ವರ್ ಸಮಿತಿಗೆ ಸಿದ್ದರಾಮಯ್ಯ ಸುರ್ಜೆವಾಲಾ ನಿಲುವೇ ಮುಳುವಾಯ್ತಾ ಎಂಬ ಪ್ರಶ್ನೆ ಎದ್ದಿದೆ.
Advertisement
ಪ್ರಣಾಳಿಕೆಯಲ್ಲಿ ಏನಿದೆ?
ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ.
ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗ ಬಜರಂಗದಳ ಮತ್ತು ಪಿಎಫ್‌ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.