ಬೆಳಗಾವಿ: ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಸ್ವಂತ ತಮ್ಮ ಕಾಂಗ್ರೆಸ್‌ನ ಸತೀಶ್ ಜಾರಕಿಹೊಳಿಯನ್ನು ಸೋಲಿಸಿ ಬಿಜೆಪಿಯ ಮಂಗಲಾ ಅಂಗಡಿ ಅವರನ್ನು ಗೆಲ್ಲಿಸಿದ್ದಾರೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
Advertisement
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಬೆಳಗಾವಿಯ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 10ರಂದು ವಿಧಾನ ಪರಿಷತ್ ಚುನಾವಣೆಗಾಗಿ ಎಲ್ಲರೂ ಕೆಲಸ ಮಾಡುತ್ತಿದ್ದೇವೆ. ಆದರೆ ರಮೇಶ್ ಜಾರಕಿಹೊಳಿ ಹಾಗೇ ಮಾಡುತ್ತಿದ್ದಾರೆ, ಹೀಗೆ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲವೊಬ್ಬರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಸ್ವಂತ ತಮ್ಮನನ್ನು ಸೋಲಿಸಿ ಮಂಗಲಾ ಅವರನ್ನು ಗೆಲ್ಲಿಸಿದ್ದರು ಎಂದು ಪಕ್ಷದ ಮುಖಂಡರಿಗೆ ಮನವರಿಕೆ ಮಾಡಿದರು. ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆಯಲ್ಲಿ ದಿನೇಶ್ ಗೂಳಿಗೌಡ ಗೆಲುವು ಶತಸಿದ್ಧ: ಸಿದ್ದರಾಮಯ್ಯ
Advertisement
ನಾವೆಲ್ಲಾ ಶಾಸಕರು, ಸಚಿವರು ಸಿಎಂ ಜೊತೆ ಚರ್ಚೆ ಮಾಡುತ್ತೇವೆ. ಈ ವಿಚಾರವನ್ನು ನಾನಿಲ್ಲಿ ಚರ್ಚೆ ಮಾಡುವುದಿಲ್ಲ. ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಜೋರಾಗಿ ನಡೆದಿದೆ. ಬಿಜೆಪಿ ಗೆಲುವಿಗೆ ಪ್ರಾಮಾಣಿಕವಾಗಿ ಕೆಲಸ ಮಾಡೋಣ, ಕಾಂಗ್ರೆಸ್ ಸೋಲಿಸೋಣ ಎಂದು ಕರೆ ನೀಡಿದರು. ಇದನ್ನೂ ಓದಿ: JDS ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಮುಂದಾಗಿರುವುದು BJP ಪಕ್ಷ ಅದೆಷ್ಟು ದುರ್ಬಲವಾಗಿದೆ ಎಂಬುದಕ್ಕೆ ಸಾಕ್ಷಿ: ಡಿಕೆಶಿ
Advertisement
Advertisement
ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿ, ಕಾಂಗ್ರೆಸ್ ಸೋಲಿಸಿ ಎನ್ನುತ್ತಿದ್ದೇವೆ. ಅದರಲ್ಲಿ ತಪ್ಪೇನಿದೆ? ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೋಕಾಕ್‌ನಲ್ಲಿ ಪಕ್ಷಕ್ಕೆ ಮುನ್ನಡೆ ಬಾರದಿದ್ದರೆ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಗೆಲ್ಲುತ್ತಿರಲಿಲ್ಲ ಎಂದು ತಿಳಿಸಿದರು.