ಚಂಡೀಗಢ: ಬಾಲಾಕೋಟ್ ದಾಳಿ ವೇಳೆ ನಮ್ಮ ಬಳಿ ರಫೇಲ್ ಇದ್ದಿದ್ದರೆ ಪಾಕಿಸ್ತಾನಕ್ಕೆ ಹೋಗಬೇಕಿರಲಿಲ್ಲ. ಇಲ್ಲಿಂದಿಲೇ ದಾಳಿ ಮಾಡಿ ಉಗ್ರರ ಅಡಗುದಾಣಗಳನ್ನು ನಾಶ ಮಾಡಬಹುದಿತ್ತು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಇಂದು ಹಯಾಣದ ಕರ್ನಲ್‍ನಲ್ಲಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಫೆಬ್ರವರಿಯಲ್ಲಿ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ವೈಮಾನಿಕ ದಾಳಿ ನಡೆಸುವ ಸಂದರ್ಭದಲ್ಲಿ ರಫೇಲ್ ಇದ್ದಿದ್ದರೆ, ನಾವು ಪಾಕಿಸ್ತಾನಕ್ಕೆ ಹೋಗಿ ದಾಳಿ ನಡೆಸಬೇಕಿರಲಿಲ್ಲ. ಬದಲಿಗೆ ಭಾರತದಲ್ಲಿಯೇ ಕುಳಿತು ಉಗ್ರರ ಅಡಗುದಾಣಗಳನ್ನು ನಿರ್ಮೂಲನೆ ಮಾಡಬಹುದಿತ್ತು ಎಂದು ತಿಳಿಸಿದರು.
Advertisement
Defence Minister Rajnath Singh, in Haryana's Karnal: If we had Rafale fighter aircraft with us, then I think we need not have gone to Pakistan for Balakot airstrike. We could have eliminated terror camps there, even while sitting in India. pic.twitter.com/hfRwuyL8UT
— ANI (@ANI) October 13, 2019
Advertisement
ಒಟ್ಟು 36 ರಫೇಲ್ ಯುದ್ಧ ವಿಮಾನಗಳ ಪೈಕಿ ಆಯುಧ ಪೂಜೆಯಂದು ಮೊದಲ ಹಂತದಲ್ಲಿ ಒಂದು ವಿಮಾನವನ್ನು ಫ್ರಾನ್ಸ್‍ನಿಂದ ಅಧಿಕೃತವಾಗಿ ಸ್ವೀಕರಿಸಿದ್ದರು. ಅದೇ ವೇಳೆ ರಫೇಲ್ ಯುದ್ಧ ವಿಮಾನಕ್ಕೆ ಪೂಜೆಯನ್ನು ಸಹ ರಾಜನಾಥ್ ಸಿಂಗ್ ಮಾಡಿದ್ದರು. ಆರ್‍ಬಿ-001 ಸಂಖ್ಯೆಯ 36 ಫ್ರೆಂಚ್ ನಿರ್ಮಿತ ರಫೇಲ್ ಫೈಟರ್ ಜೆಟ್‍ಗಳ ಪೈಕಿ ಮೊದಲ ಹಂತದಲ್ಲಿ ಒಂದು ವಿಮಾನವನ್ನು ಅಧಿಕೃತವಾಗಿ ಭಾರತಕ್ಕೆ ಹಸ್ತಾಂತರಿಸಲಾಗಿದೆ.
Advertisement
2016ರಲ್ಲಿ ಭಾರತವು 36 ರಫೇಲ್ ವಿಮಾನಗಳನ್ನು ಖರೀದಿಸಲು ಫ್ರಾನ್ಸ್‍ನೊಂದಿಗೆ 59 ಸಾವಿರ ಕೋಟಿ ರೂ.ಗಳ ಒಪ್ಪಂದಕ್ಕೆ ಸಹಿ ಹಾಕಿತ್ತು. ಅದರಲ್ಲಿ ಮೊದಲ ಬ್ಯಾಚ್ 2020ರ ವೇಳೆಗೆ ಭಾರತಕ್ಕೆ ಹಸ್ತಾಂತರಿಸುವುದಾಗಿ ಕಂಪನಿ ತಿಳಿಸಿತ್ತು. 2022ರ ವೇಳೆಗೆ ಎಲ್ಲ 36 ಜೆಟ್‍ಗಳು ಭಾರತವನ್ನು ತಲುಪುವ ನಿರೀಕ್ಷೆ ಇದ್ದು, ಐಎಎಫ್ ಡೆಪ್ಯೂಟೇಷನ್ ಸಿದ್ಧವಾಗಲಿದೆ. ಏಪ್ರಿಲ್ ಅಥವಾ ಮೇ ವೇಳೆಗೆ ಏಳು ರಫೇಲ್ ಜೆಟ್‍ಗಳು ಭಾರತಕ್ಕೆ ಬರಲಿವೆ ಎಂದು ನಿರೀಕ್ಷಿಸಲಾಗಿದೆ.
Advertisement
यदि हमारे पास पहले ही राफ़ेल होता तो बालाकोट में मौजूद आतंकवादी ठिकाने को ध्वस्त करने के लिए पाकिस्तान जाने की भी ज़रूरत नहीं पड़ती। यह विमान भारत की धरती से ही वहाँ मौजूद आतंकी ठिकाने का सफ़ाया कर देता। pic.twitter.com/X8wL5aXrTh
— Rajnath Singh (@rajnathsingh) October 13, 2019
ರಫೇಲ್ ವಿಶೇಷತೆ ಏನು?
ಎರಡು ಎಂಜಿನ್, ಎರಡು ಸೀಟ್ ಗಳನ್ನು ಹೊಂದಿರುವ ವಿಮಾನ ಗಂಟೆಗೆ ಗರಿಷ್ಟ 2 ಸಾವಿರ ಕಿ.ಮೀ ವೇಗದಲ್ಲಿ ಹಾರಾಟ ನಡೆಸಬಲ್ಲದು. 9,500 ಕೆಜಿ ತೂಕದ ಈ ವಿಮಾನ 9,500 ಕೆಜಿ ತೂಕದ ಶಸ್ತ್ರಾಸ್ತ್ರಗಳನ್ನು ಹೊತ್ತುಕೊಂಡು ಹೋಗುವ ಸಾಮಥ್ರ್ಯವನ್ನು ಹೊಂದಿದೆ. ಈ ವಿಮಾನ ಇಳಿಯಲು ಮತ್ತು ಹಾರಾಟಕ್ಕೆ 400 ಮೀಟರ್ ಉದ್ದದ ರನ್‍ವೇ ಅಗತ್ಯವಿಲ್ಲ.
ವೈರಿಗಳನ್ನು ಗುರುತಿಸಲು ರಫೇಲ್ ವಿಮಾನದಲ್ಲಿ ಸ್ಪೆಕ್ಟ್ರಾ ಸಿಸ್ಟಂ ಇದೆ. ಥೇಲ್ಸ್ ಗ್ರೂಪ್ ಈ ಸ್ಪೆಕ್ಟ್ರಾ ಸಿಸ್ಟಂ ಅನ್ನು ಅಭಿವೃದ್ಧಿ ಪಡಿಸಿದೆ. ರೇಡಿಯೋ ಫಿಕ್ವೆನ್ಸಿ, ರೇಡಾರ್ ವಾರ್ನಿಂಗ್ ರಿಸೀವರ್, ಲೇಸರ್ ವಾರ್ನಿಂಗ್, ಮಿಸೈಲ್ ವಾರ್ನಿಂಗ್, ರೇಡಾರ್ ಜಾಮರ್ ಗಳನ್ನು ಸ್ಪೆಕ್ಟ್ರಾ ಸಿಸ್ಟಂ ನಲ್ಲಿರುವ ಸೆನ್ಸರ್ ಗಳು ಗ್ರಹಿಸುತ್ತವೆ. 1800 ಕಿ.ಮಿ ವ್ಯಾಪ್ತಿ ವಿರೋಧಿಗಳ ಕಾರ್ಯ ಚಟುವಟಿಕೆಯನ್ನು ಗ್ರಹಿಸುವ ಸಾಮಥ್ರ್ಯ ಹೊಂದಿದೆ. ಈ ಕಾರಣಕ್ಕಾಗಿಯೇ ರಫೇಲ್ ವಿಮಾನ ಬೇರೆ ಯುದ್ಧ ವಿಮಾನಗಳಿಗಿಂತ ಭಿನ್ನವಾಗಿ ಗುರುತಿಸಿಕೊಂಡಿದೆ.
ವೈರಿಗಳ ನೆಲೆಯ ಮೇಲೆ 100 ಕಿ.ಮೀ. ಎತ್ತರದಿಂದಲೇ ದಾಳಿ ಮಾಡುವ ಸಾಮಥ್ರ್ಯ ರಫೇಲ್ ಯುದ್ಧ ವಿಮಾನಕ್ಕಿದೆ. ಜೊತೆಗೆ 50,000 ಅಡಿ ಎತ್ತರದಲ್ಲಿ ಹಾಡುವ ಸಾಮಥ್ರ್ಯ ಹೊಂದಿದೆ.
ಡಸಾಲ್ಟ್ ಕಂಪನಿ 1986ರಲ್ಲಿ ಮೊದಲ ರಫೇಲ್ ವಿಮಾನವನ್ನು ನಿರ್ಮಿಸಿದ್ದು, ಭಾರತ ಅಲ್ಲದೇ ಈಜಿಪ್ಟ್, ಕತಾರ್ ದೇಶಗಳು ರಫೇಲ್ ಖರೀದಿ ಸಂಬಂಧ ಡಸಾಲ್ಟ್ ಕಂಪನಿಯ ಜೊತೆ ಮಾತುಕತೆ ನಡೆಸಿವೆ.
ಯಾವ ದೇಶ ಏನು ಬೇಡಿಕೆ ಇಡುತ್ತದೋ ಆ ಬೇಡಿಕೆಗೆ ಅನುಗುಣವಾಗಿ ಡಸಾಲ್ಟ್ ಕಂಪನಿ ರಫೇಲ್ ವಿಮಾನವನ್ನು ಅಭಿವೃದ್ಧಿ ಪಡಿಸುತ್ತದೆ. ಲೋ ಬ್ಯಾಂಡ್ ಜಾಮರ್, 10 ಗಂಟೆಗಳ ಹಾರಾಟ ಮಾಹಿತಿ ಸಂಗ್ರಹ, ಇಸ್ರೇಲಿ ಹೆಲ್ಮೆಟ್ ಮೌಂಟೆಡ್ ಡಿಸ್ಪ್ಲೇ, ರೆಡಾರ್ ವಾರ್ನಿಂಗ್ ಇನ್ಫ್ರಾರೆಡ್ ಶೋಧ ಮತ್ತು ಟ್ರ್ಯಾಕಿಂಗ್ ಸೇರಿದಂತೆ ಹಲವು ಅತ್ಯಾಧುನಿಕ ಉಪಕರಣಗಳ ಹಾಗೂ ಸೌಲಭ್ಯಗಳನ್ನು ಅಳವಡಿಸಬೇಕೆಂದು ಭಾರತ ಬೇಡಿಕೆ ಇಟ್ಟಿದ್ದು, ಈ ಬೇಡಿಕೆಗೆ ಅನುಗುಣವಾಗಿ ರಫೇಲ್ ವಿಮಾನ ತಯಾರಾಗುತ್ತಿದೆ.
ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಗಂಭೀರವಾಗಿ ಆರೋಪಿಸಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿಯೂ ಇದನ್ನೇ ಅಸ್ತ್ರವಾಗಿ ಬಳಸಿಕೊಂಡು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಷ್ಟೇ ಅಲ್ಲದೆ ಚೌಕಿದಾರ್ ಚೋರ್ ಹೈ ಎಂದು ಸುಪ್ರೀಂಕೋರ್ಟ್ ಹೇಳಿದೆ ಅಂತ ರಾಹುಲ್ ಗಾಂಧಿ ಚುನಾವಣಾ ಪ್ರಚಾರದ ವೇಳೆ ಹೇಳಿದ್ದರು. ಈ ವಿಚಾರವಾಗಿ ಬಿಜೆಪಿ ಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ಬಳಿಕ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ ಮುಂದೆ ವಿಷಾಧ ವ್ಯಕ್ತಪಡಿಸಿದ್ದರು.