ಹೈದರಾಬಾದ್: ಇತ್ತೀಚೆಗಷ್ಟೇ ವಿಮೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮದ್ಯಪಾನಪ್ರಿಯರ ಸಂಘ ಸರ್ಕಾರಕ್ಕೆ ಮನವಿ ಮಾಡಿದ್ದು, ಕರ್ನಾಟಕದಾದ್ಯಂತ ಸುದ್ದಿಯಾಗಿತ್ತು. ಇದೀಗ ಬೋಳುತಲೆ ಪುರುಷರ ಸಂಘವೊಂದು (Bald Mens Group), ಪ್ರತಿ ತಿಂಗಳು 6 ಸಾವಿರ ಪಿಂಚಣಿ ನೀಡಬೇಕೆಂದು ಸರ್ಕಾರಕ್ಕೆ (Government) ಒತ್ತಾಯಿಸಿರೋದು ಸುದ್ದಿಯಾಗಿದೆ.
Advertisement
ಹೌದು. ತಮಗೆ ತಿಂಗಳಿಗೆ 6 ಸಾವಿರ ಪಿಂಚಣಿ (Pension) ನೀಡುವಂತೆ ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯ ತಂಗಲ್ಲಪಲ್ಲಿ ಗ್ರಾಮದ ಬೋಳುತಲೆಯ ಪುರುಷರ ಸಂಘ ಸರ್ಕಾರವನ್ನು ಒತ್ತಾಯಿಸಿದೆ. ಬೋಳು ತಲೆಯ ಪುರುಷರಿಗೆ ಸಂಕ್ರಾಂತಿ (Sankranti Festival) ಉಡುಗೊರೆಯಾಗಿ ಪಿಂಚಣಿ ಘೋಷಿಸಬೇಕು. ಸರ್ಕಾರ ವೃದ್ಧರು, ವಿಧವೆಯರು, ದೈಹಿಕ ವಿಕಲಚೇತನರು ಮತ್ತು ಇತರರಿಗೆ ಪಿಂಚಣಿ ನೀಡುತ್ತಿದೆ. ಅದರಂತೆ ನಮ್ಮ ಮನವಿಯನ್ನೂ ಗಂಭೀರವಾಗಿ ಪರಿಗಣಿಸಬೇಕು ಎಂದು ಬೋಳುತಲೆ ಪುರುಷರ ಸಂಘ ತೆಲಂಗಾಣ ಸರ್ಕಾರಕ್ಕೆ (Telangana Government) ಆಗ್ರಹಿಸಿದೆ.
Advertisement
Advertisement
ನಾವು ತಲೆಯಲ್ಲಿ ಕೂದಲು ಇಲ್ಲದೇ ಸಾಕಷ್ಟು ಮುಜುಗರ ಅನುಭವಿಸುತ್ತಿದ್ದೇವೆ. ಕೆಲವರು ನಮ್ಮನ್ನ ನೋಡಿ ಅಪಹಾಸ್ಯ ಮಾಡ್ತಾರೆ. ಇದರಿಂದ ಮಾನಸಿಕವಾಗಿ ಹಿಂಸೆ ಅನುಭವಿಸುತ್ತಿದ್ದೇವೆ. ಆದ್ದರಿಂದ ಸರ್ಕಾರ ನಮ್ಮ ಬಗ್ಗೆ ವಿಶೇಷವಾಗಿ ಗಮನಹರಿಸಬೇಕು ಎಂದು ಕೋರಿದೆ. ಇದನ್ನೂ ಓದಿ: ಗಂಭೀರ್ಗೆ ಯಾಕೆ ಧೋನಿ, ಕೊಹ್ಲಿ ಮೇಲೆ ಅಷ್ಟೊಂದು ಸಿಟ್ಟು?
Advertisement
ಇದೇ ತಿಂಗಳ ಜನವರಿ 5ರಂದೇ ಬೋಳುತಲೆ ಪುರುಷರ ಸಂಘ ಅನೌಪಚಾರಿಕ ಸಭೆ ನಡೆಸಿ ಈ ಬಗ್ಗೆ ಚರ್ಚಿಸಿದೆ. ಸಂಕ್ರಾಂತಿ ನಂತರ ಮತ್ತೊಂದು ಸಭೆ ನಡೆಸಲು ನಿರ್ಧರಿಸಿದೆ. ಇದರಲ್ಲಿ ಕೂದಲು ಕಳೆದುಕೊಂಡಿರುವ 30ಕ್ಕೂ ಹೆಚ್ಚು ಪುರುಷರು ಭಾಗವಹಿಸುವ ನಿರೀಕ್ಷೆ ಇದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕೋಲಾರದಿಂದ ಸ್ಪರ್ಧಿಸುವ ಬಗ್ಗೆ ನಾಳೆ ಅಧಿಕೃತವಾಗಿ ಘೋಷಣೆ ಮಾಡ್ತಾರಾ ಸಿದ್ದರಾಮಯ್ಯ?
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k