ಬಲಿಪಾಡ್ಯಮಿ ಹಬ್ಬದಂದು ದೇವಾಲಯಗಳಲ್ಲಿ ಗೋಪೂಜೆ

Public TV
1 Min Read
GOVU

ಹೊಸಕೋಟೆ: ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಬಲಿಪಾಡ್ಯಮಿ ದಿನದಂದು ರಾಜ್ಯದ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಪೂಜಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ತಿಳಿಸಿದ್ದಾರೆ.

GOVU POOJA

ಗೋವುಗಳಿಗೆ ಸ್ನಾನ ಮಾಡಿಸಿ, ದೇವಾಲಯಕ್ಕೆ ಕರೆತಂದು ಅರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಲಾಗುವುದು. ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗೋಗ್ರಾಸವನ್ನು ಹಸುವಿಗೆ ನೀಡಿ ಧೂಪ, ದೀಪಗಳಿಂದ ಪೂಜಿಸಿ ನಮಸ್ಕರಿಸುವ ವ್ಯವಸ್ಥೆ ಮಾಡಲಾಗುವುದು. ಅಂದು ಸಂಜೆ 5:30 ರಿಂದ 6:30 ರವರೆಗೆ ಗೋಧೋಳಿ ಲಗ್ನದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ಮಾಡಿ ಸ್ಪೆಷಲ್ ಬರ್ಫಿ

FIRECRACKERS

ಗೋಪೂಜೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದಂತೆ ಕ್ರಮವಹಿಸುವುದರ ಜೊತೆಯಲ್ಲಿ ಗೋವುಗಳನ್ನು ದೇವಸ್ಥಾನಕ್ಕೆ ಕರೆತರುವುದು ಹಾಗೂ ಕಳುಹಿಸುವ ಪೂಜೆಯ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ವಿಶೇಷ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾವುದು. ಇದನ್ನೂ ಓದಿ: ಶೇರ್‌ ಮಾಡೋದನ್ನು ನಿಲ್ಲಿಸಿ – ವೈರಲ್ ಆಗಿರುವ ಅಪ್ಪು ಫೋಟೋ ಸೀಕ್ರೆಟ್ ರಿವಿಲ್

ಗೋವುಗಳು ಅಲಭ್ಯವಾದಲ್ಲಿ ಸ್ಥಳೀಯ ಗೋಶಾಲೆ ಮಠದಲ್ಲಿರುವ ಇಲಾಖೆಯ ಗೋವುಗಳು ಅಥವಾ ಹತ್ತಿರದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಸಂಪರ್ಕಿಸುವುದು. ಪೂಜಾ ಸಂದರ್ಭದಲ್ಲಿ ಅಧಿಕಾರಿ/ ಸಿಬ್ಬಂದಿ ಹಾಜರಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *