– ಬಾಣಂತಿಯರ ಸಾವು ಪ್ರಕರಣ ತನಿಖೆಗೆ ಸಮಿತಿ ರಚನೆ
ಬಳ್ಳಾರಿ/ಬೆಳಗಾವಿ: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು (Ballari Maternal Death Case) ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಬಳ್ಳಾರಿ ಪ್ರಕರಣ ಹಸಿರುರುವಾಗಲೇ ಬೆಳಗಾವಿಯಲ್ಲಿ ಆಘಾತಕಾರಿ ಹಾಗೂ ಭಯಾನಕ ಸಂಗತಿ ಬಯಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆಯಲ್ಲಿಯೇ ನವಜಾತ ಶಿಶುಗಳು, ಬಾಣಂತಿಯರು ದಾರುಣವಾಗಿ ಉಸಿರು ಚೆಲ್ಲಿದ್ದಾರೆ. ಕುಂದಾನಗರಿಯ ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospital) ಕೇವಲ ಆರೇ ತಿಂಗಳಲ್ಲಿ 322 ಶಿಶುಗಳು ಹಾಗೂ 29 ಬಾಣಂತಿಯರು ಮೃತಪಟ್ಟಿದ್ದಾರೆ.
Advertisement
ಕಳೆದ ಏಪ್ರಿಲ್ ತಿಂಗಳಿನಿಂದ ಅಕ್ಟೋಬರ್‌ವರೆಗೆ ಈ ಸಾವಾಗಿದೆ ಎಂದು ಡಿಹೆಚ್‌ಒ ಶರಣಪ್ಪ ಗಡೇದ್ ಮಾಹಿತಿ ನೀಡಿದ್ದಾರೆ. ಜಿಲ್ಲಾಸ್ಪತ್ರೆಯೊಂದರಲ್ಲೇ 172 ಶಿಶುಗಳು ಮಾರಣಹೋಮವಾಗಿದೆ. ಪ್ರತಿ ತಿಂಗಳು ಸರಾಸರಿ 20ರಿಂದ 25 ಮಕ್ಕಳು ಬೇರೆ ಬೇರೆ ಕಾರಣಗಳಿಂದ ಮೃತಪಟ್ಟಿವೆ. ಅಪೌಷ್ಠಿಕತೆಯಿಂದ ಸಾವುಗಳಾಗಿದೆ ಎಂದಿದ್ದಾರೆ. ನವಜಾತ ಶಿಶುಗಳು ಹಾಗೂ ಬಾಣಂತಿಯರ ಸಾವಿನ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್, ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ದಿನ ರಾತ್ರಿ 2-3 ಹುಡುಗರನ್ನ ಕರೆದುಕೊಂಡು ಬರುತ್ತಿದ್ದಳು – ಅಪಾರ್ಟ್ಮೆಂಟ್ ಮಾಲೀಕ ಕೆಂಪೇಗೌಡ
Advertisement
Advertisement
ಆರು ತಿಂಗಳಲ್ಲಿ 322 ಮಕ್ಕಳು ಮೃತಪಟ್ಟಿರುವುದು ದೊಡ್ಡ ದುರಂತ. ಪೌಷ್ಠಿಕ ಆಹಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿದೆ. ಬಳ್ಳಾರಿ ಮಾದರಿಯಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ʻಪಬ್ಲಿಕ್ ಟಿವಿʼ ವರದಿ ಬೆನ್ನಲ್ಲೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸರಣಿ ಸಾವಿನ ಬಗ್ಗೆ ತನಿಖೆ ನಡೆಸೋದಾಗಿ ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರದ ಬೊಕ್ಕಸ ಬರಿದಾಗಿ ಕಳಪೆ ಔಷಧ ಖರೀದಿ, ಬಾಣಂತಿಯರ ಸಾವಿಗೆ ಇದೇ ಕಾರಣ: ಜೋಶಿ
Advertisement
ಪರಿಹಾರ ಘೋಷಣೆ:
ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣವನನ್ನ ಸರ್ಕಾರ ಇದೀಗ ಗಂಭಿರವಾಗಿ ಪರಿಗಣಿಸಿದೆ. ತನಿಖೆಗಾಗಿ ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಕಮಿಟಿ ರಚನೆ ಮಾಡಿದೆ. ಈ ಸಮಿತಿ ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಗಳ ತಜ್ಞರು ಸೇರಿ ಐವರು ಸದಸ್ಯರನ್ನು ಒಳಗೊಂಡಿದೆ. ಇದನ್ನೂ ಓದಿ: ನಕಲಿ ಅಡ್ರೆಸ್ ಕೊಟ್ಟು ಮಾದಕ ವಸ್ತು ಕೊರಿಯರ್ – 2 ತಿಂಗಳಾದ್ರೂ ಪತ್ತೆಯಾಗಿಲ್ಲ ವಿಳಾಸ
ಔಷಧಿಗಳ ಖರೀದಿ ಮತ್ತು ಪರೀಕ್ಷೆಗೆ ಒಳಪಡಿಸುವಲ್ಲಿ ಆಗಿರುವ ನಿಯಮ ಉಲ್ಲಂಘನೆ ಬಗ್ಗೆ ಈ ಸಮಿತಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದೆ. ಇತ್ತ ಸಿಎಂ ಸಿದ್ದರಾಮಯ್ಯ ಬಾಣಂತಿಯರ ಸಾವು ಪ್ರಕರಣ ಸಂಬಂಧ ಪ್ರತಿಕ್ರಿಯಿಸಿ, ಕಳಪೆ ಔಷಧಿಯಿಂದ ಮೃತಪಟ್ಟಿರೋದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ ಎಂದಿದ್ದಾರೆ. ಅಲ್ಲದೇ ಮೃತ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಕೊಡೋದಾಗಿ ಘೋಷಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಈ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸೋದಾಗಿ ಹೇಳಿದ್ದಾರೆ.