ಬಳ್ಳಾರಿ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 5.52 ಲಕ್ಷ ಮೌಲ್ಯದ ಅಕ್ರಮ ಪಡಿತರ ಅಕ್ಕಿಯನ್ನು (Ration Rice) ಬಳ್ಳಾರಿಯ (Ballari) ಕುರಗೋಡು ಪೊಲೀಸರು (Kurugodu Police) ಭರ್ಜರಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಬಳಿ ಲಾರಿ ಸಮೇತ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಖದೀಮರು ಲಾರಿ ಮೂಲಕ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದಾಗ, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಬಾದಹಟ್ಟಿ ಗ್ರಾಮದ ಬಳಿಯ ಲೇಔಟ್‌ನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿದ್ದ ಆರೋಪಿಗಳು, ಬಳಿಕ ಲಾರಿಗೆ ಲೋಡ್ ಮಾಡಿ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಂತೋಷ್ ಲಾಡ್ ಕಣ್ಣೀರು

ಯರ್ರಿಸ್ವಾಮಿ, ಉಮಾಶಂಕರ ಎಂಬ ಅಕ್ರಮ ಅಕ್ಕಿ ದಂಧೆಕೋರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬಿಸಿದ್ದಾರೆ. ಇದನ್ನೂ ಓದಿ: Twisha Sharma Case | ಅತ್ತೆ ವಿಧಿವಿಜ್ಞಾನ ಸಾಕ್ಷ್ಯಗಳನ್ನು ತಿರುಚುವ ಸಾಧ್ಯತೆ ಇದೆ – ಹೈಕೋರ್ಟ್
