ಬಳ್ಳಾರಿ: ಬುಧವಾರ ಸಂಡೂರು ವಿಧಾನಸಭಾ (Sandur By Election) ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸಂಡೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಮತಗಟ್ಟೆಗಳಿಗೆ ನಿಯೋಜಿಸಿರುವ ಅಧಿಕಾರಿಗಳು, ಸಿಬ್ಬಂದಿಗಳಿಂದ ಮಸ್ಟರಿಂಗ್ ಕಾರ್ಯ (Mustering Process) ನಡೆದಿದೆ.
ಸಂಡೂರು ಕ್ಷೇತ್ರದಲ್ಲಿ ಒಟ್ಟು 253 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. 304 ಮತಗಟ್ಟೆ ಅಧಿಕಾರಿಗಳು, 304 ಸಹಾಯಕ ಅಧಿಕಾರಿಗಳು, 608 ಮತದಾನ ಸಹಾಯಕ ಸಿಬ್ಬಂದಿಗಳು ಸೇರಿ ಮತಗಟ್ಟೆ ಕೇಂದ್ರಗಳಿಗೆ 1,215 ಅಧಿಕಾರಿಗಳು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಹೆಚ್.ಡಿ.ಕುಮಾರಸ್ವಾಮಿಗೆ ಕರಿಯ ಎಂದಿದ್ದಕ್ಕೆ ಕ್ಷಮೆಯಾಚಿಸಿದ ಜಮೀರ್
Advertisement
Advertisement
ಮುಂಜಾಗ್ರತಾ ಕ್ರಮವಾಗಿ ಸೂಕ್ಷ್ಮ ಅತಿಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚುವರಿ ಭದ್ರತೆ ನಿಯೋಜನೆ ಮಾಡಲಾಗಿದೆ. ಮತಗಟ್ಟೆಗಳಿಗೆ ತೆರಳಲು ಸಿಬ್ಬಂದಿಗಳಿಗೆ ಬಸ್ ಹಾಗೂ ಕ್ರೂಸರ್ ವಾಹನಗಳ ವ್ಯವಸ್ಥೆ ಮಾಡಲಾಗಿದೆ.
Advertisement
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,36,100 ಮತದಾರರಿದ್ದಾರೆ. ಮಹಿಳೆಯರು 1,18,282, ಪುರುಷರು 1,17,789 ಹಾಗೂ ಇತರೆ 29 ಮತದಾರರು ತಮ್ಮ ಮತ ಚಲಾಯಿಸಲಿದ್ದಾರೆ.