ಶಿವಮೊಗ್ಗ: ಬಳ್ಳಾರಿಯಲ್ಲಿ (Ballari) ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ಘಟನೆ ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ (Ballari Violence) ದುಷ್ಕೃತ್ಯವಾಗಿದೆ. ಈ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ನಿನ್ನೆಯ ಘಟನೆ ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯವಾಗಿದೆ, ಸದರಿ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುವೆ.
ಜನಾರ್ಧನ ರೆಡ್ಡಿ ಮತ್ತವರ ಕುಟುಂಬವನ್ನು ಗುರಿಯನ್ನಾಗಿಸಿಕೊಂಡು ನಡೆದಿರುವ ಈ ಘಟನೆಗೆ ಮಹರ್ಷಿ ವಾಲ್ಮೀಕಿ…
— Vijayendra Yediyurappa (@BYVijayendra) January 2, 2026
ಜನಾರ್ಧನ ರೆಡ್ಡಿ (anardhana Reddy) ಮತ್ತವರ ಕುಟುಂಬವನ್ನು ಗುರಿಯನ್ನಾಗಿಸಿಕೊಂಡು ನಡೆದಿರುವ ಈ ಘಟನೆಗೆ ಮಹರ್ಷಿ ವಾಲ್ಮೀಕಿ ಪ್ರತಿಮೆಯ ಉದ್ಘಾಟನೆಯ ಕಾರ್ಯಕ್ರಮದ ಬ್ಯಾನರ್ ಅಳವಡಿಸುವುದನ್ನು ನೆಪವಾಗಿಸಿಕೊಳ್ಳಲಾಗಿದೆ. ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿದಿಲ್ಲ. ನಾಗರಿಕ ಸಮಾಜ ನೆಮ್ಮದಿಯಾಗಿ ಬದುಕುವ ವಾತಾವರಣವನ್ನು ವಿಚಲಿತಗೊಳಿಸಿ, ಭಯಗ್ರಸ್ಥ ನಗರವನ್ನಾಗಿಸಲು ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ಅವರ ಬೆಂಬಲಿಗರು ದುಷ್ಕೃತ್ಯಕ್ಕೆ ಇಳಿದಂತಿದೆ. ಇದನ್ನೂ ಓದಿ: ಜನಾರ್ದನ್ ರೆಡ್ಡಿ ಮೇಲೆ ಗುಂಡು ಹಾರಿತು, ಒಬ್ಬ ಪೆಟ್ರೋಲ್ ಬಾಂಬ್ ಎಸೆದ: ಶ್ರೀರಾಮುಲು ಗಂಭೀರ ಆರೋಪ
ಜನಾರ್ದನ ರೆಡ್ಡಿಯವರು ಬಿಜೆಪಿಗೆ ಮರು ಸೇರ್ಪಡೆಯಾದ ನಂತರ ಸ್ಥಳೀಯವಾಗಿ ಪಕ್ಷಸಂಘಟನೆ ಪ್ರಬಲವಾಗುತ್ತಿದೆ. ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ನಡುವಿನ ಬಾಂಧವ್ಯ ಹಿಂದಿನಂತೆ ಬೆಸೆದಿರುವುದು ರಾಜಕೀಯ ದುಷ್ಟರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ವಿಪರ್ಯಾಸವೆಂದರೆ ಸ್ಥಳೀಯ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಛೇರಿಗಳಾಗಿ ಮಾರ್ಪಟ್ಟಿವೆ. ಸ್ಥಳೀಯ ಪೊಲೀಸರು ಕಾಂಗ್ರೆಸ್ ಕೈಗೊಂಬೆಯಾಗಿದ್ದಾರೆ. ಪೊಲೀಸರು ಮುನ್ನೆಚ್ಚರಿಕೆ ಕ್ರಮ ವಹಿಸಿದ್ದರೆ ಈ ದುಷ್ಕೃತ್ಯವನ್ನು ತಡೆಯಬಹುದಿತ್ತು.
ಈ ಕೂಡಲೇ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಅವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಒತ್ತಾಯಿಸುವೆ. ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ತನಿಖೆ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿ ರಾಜಕೀಯ ಘರ್ಷಣೆ ಸೂಕ್ತ ತನಿಖೆ ಆಗಬೇಕು: ಸುರೇಶ್ ಕುಮಾರ್

