ರೈಲು ಹೈಜಾಕ್‌ನಲ್ಲಿ ಸೆರೆಯಾಗಿದ್ದ ಎಲ್ಲಾ 214 ಒತ್ತೆಯಾಳುಗಳ ಸಾಮೂಹಿಕ ಹತ್ಯೆ: ಬಿಎಲ್‌ಎ ಹೇಳಿಕೆ

Public TV
1 Min Read
jaffar express hijack

– ಪಾಕಿಸ್ತಾನ ಸಾಂಪ್ರದಾಯಿಕ ಮೊಂಡುತನ, ದುರಹಂಕಾರ ಪ್ರದರ್ಶಿಸಿದೆ ಎಂದು ಆರೋಪ

ಇಸ್ಲಾಮಾಬಾದ್: ಜಾಫರ್‌ ಎಕ್ಸ್‌ಪ್ರೆಸ್‌ ಅಪಹರಣದ (Jaffar Express Hijack) ನಂತರ ಒತ್ತೆಯಾಳಾಗಿರಿಸಿಕೊಂಡಿದ್ದ ಎಲ್ಲಾ 214 ಮಂದಿಯನ್ನೂ ಹತ್ಯೆ ಮಾಡಲಾಗಿದೆ ಎಂದು ಬಲೂಚ್‌ ಲಿಬರೇಶನ್‌ ಆರ್ಮಿ (BLA) ಹೇಳಿಕೊಂಡಿದೆ.

ನಮ್ಮ ಹೋರಾಟಗಾರರಿಂದ ಒತ್ತೆಯಾಳುಗಳಾಗಿದ್ದ ಎಲ್ಲಾ 214 ಮಂದಿಯನ್ನೂ ಹತ್ಯೆ ಮಾಡಲಾಗಿದೆ. ಪಾಕಿಸ್ತಾನಿ ಭದ್ರತಾ ಪಡೆಗಳೊಂದಿಗೆ ಇನ್ನೂ ಎನ್‌ಕೌಂಟರ್ ನಡೆಯುತ್ತಿದೆ ಎಂದು ತಿಳಿಸಿದೆ. ಇದನ್ನೂ ಓದಿ: Pakistan Train Hijack | 150ಕ್ಕೂ ಹೆಚ್ಚು ಸೈನಿಕರ ಹತ್ಯೆ – 50ಕ್ಕೂ ಹೆಚ್ಚು ಒತ್ತೆಯಾಳುಗಳು ಗಲ್ಲಿಗೆ

pakistan train hijacked 2

ಬಿಎಲ್‌ಎ ಪ್ರತ್ಯೇಕತಾವಾದಿಗಳನ್ನು ಸದೆಬಡಿದು ಜನರ ರಕ್ಷಣೆ ಮಾಡಿರುವುದಾಗಿ ಪಾಕಿಸ್ತಾನ ಹೇಳಿಕೆ ನೀಡಿತ್ತು. ಆದರೆ, ಈ ಹೇಳಿಕೆಗೆ ತದ್ವಿರುದ್ಧವಾದ ಹೇಳಿಕೆಯನ್ನು ಬಿಎಲ್‌ಎ ನೀಡಿದೆ. ಪಾಕಿಸ್ತಾನ ಹೇಳುತ್ತಿರುವುದೆಲ್ಲ ಸುಳ್ಳು ಎಂದಿದೆ.

ನಮ್ಮ ಬೇಡಿಕೆಗಳನ್ನು ಈಡೇರಿಸಲು 48 ಗಂಟೆಗಳ ಸಮಯ ನೀಡಲಾಗಿತ್ತು. ಪಾಕಿಸ್ತಾನವು ತನ್ನ ಸಾಂಪ್ರದಾಯಿಕ ಮೊಂಡುತನ ಮತ್ತು ಮಿಲಿಟರಿ ದುರಹಂಕಾರವನ್ನು ಪ್ರದರ್ಶಿಸಿತು. ಈ ಹಿನ್ನೆಲೆ 214 ಒತ್ತೆಯಾಳುಗಳನ್ನು ಗಲ್ಲಿಗೇರಿಸಿದೆ. ಪಾಕ್ ಮಾತುಕತೆಗೆ ನಿರಾಕರಿಸಿದ ಹಿನ್ನೆಲೆ ಸಾಮೂಹಿಕವಾಗಿ ಹತ್ಯೆ ಮಾಡಿರುವುದಾಗಿ ಬಂಡುಕೋರ ಗುಂಪಿನ ವಕ್ತಾರ ಜೀಯಂಡ್ ಬಲೂಚ್ ಹೇಳಿದ್ದಾರೆ. ಇದನ್ನೂ ಓದಿ: ಪಾಕ್‌ ರೈಲು ಹೈಜಾಕ್‌; 150 ಸೆರೆಯಾಳುಗಳ ರಕ್ಷಣೆ – 27 ಉಗ್ರರ ಹತ್ಯೆ

pakistan train hijacked

ಪಾಕಿಸ್ತಾನಿ ಸೇನೆಯು ಪರಿಸ್ಥಿತಿಯನ್ನು ತಪ್ಪಾಗಿ ನಿರೂಪಿಸಲು ಪ್ರಯತ್ನಿಸುತ್ತಿದೆ. ಯುದ್ಧ ನಿಯಮಗಳ ಅಡಿ ಕೆಲವರನ್ನು ನಾವೇ ಬಿಡುಗಡೆ ಮಾಡಿದ್ದೇವೆ. ಇದನ್ನು ತಪ್ಪಾಗಿ ನಿರೂಪಿಸಿ ಪಾಕ್ ಸುಳ್ಳು ಹೇಳಿದೆ ಎಂದು ಬಿಎಲ್‌ಎ ಪ್ರತಿಕ್ರಿಯಿಸಿದೆ.

ಹೇಳಿಕೆಯಲ್ಲಿ, ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ 12 ಬಿಎಲ್‌ಎ ಹೋರಾಟಗಾರರಿಗೆ ಶ್ರದ್ಧಾಂಜಲಿ ಅರ್ಪಿಸಿದೆ. 33 ಬಿಎಲ್‌ಎ ಹೋರಾಟಗಾರರನ್ನು ಸೆದೆಬಡಿದು ಜನರನ್ನು ರಕ್ಷಿಸಿರುವುದಾಗಿ ಪಾಕ್‌ ಹೇಳಿತ್ತು.

Share This Article