ನವದೆಹಲಿ: ದೀಪಾವಳಿ (Diwali) ಮತ್ತು ದಸರಾ ಸಮೀಸುತ್ತಿರುವ ಹಿನ್ನಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಪಟಾಕಿ (Firecrackers) ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಚಳಿಗಾಲದಲ್ಲಿ ಮಾಲಿನ್ಯದ ಪ್ರಮಾಣ ತಗ್ಗಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದೆಹಲಿ ಸರ್ಕಾರದ ಪರಿಸರ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ದೆಹಲಿ ಸರ್ಕಾರ ಈ ಪದ್ಧತಿ ಜಾರಿ ಮಾಡುತ್ತಾ ಬರುತ್ತಿದೆ. ಈ ವಿಚಾರವಾಗಿ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲು ದೆಹಲಿ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಈ ನಿರ್ಧಾರದಿಂದ ಕಳೆದ ಕೆಲವು ವರ್ಷಗಳಿಂದ ದೆಹಲಿಯ ಗಾಳಿಯ ಗುಣಮಟ್ಟ ಗಮನಾರ್ಹವಾಗಿ ಸುಧಾರಿಸಿದೆ ಎಂದಿದ್ದಾರೆ. ಇದನ್ನೂ ಓದಿ: ಹರಿಪ್ರಸಾದ್ ವೈಯಕ್ತಿಕ ಅಸಮಧಾನ ಹೊರಹಾಕ್ತಿದ್ದಾರೆ, ಹೈಕಮಾಂಡ್ ನೋಡಿಕೊಳ್ಳುತ್ತೆ – ಸಚಿವ ಬೋಸರಾಜು
ಕಳೆದ ಆರು ವರ್ಷಗಳಲ್ಲಿ ದೆಹಲಿಯ ಗಾಳಿಯ ಗುಣಮಟ್ಟದಲ್ಲಿ ಗಣನೀಯ ಸುಧಾರಣೆಯನ್ನು ಕಂಡಿದ್ದೇವೆ. ಅದು ಇನ್ನಷ್ಟು ಸುಧಾರಿಸಬೇಕಾಗಿದೆ. ಆದ್ದರಿಂದ ನಾವು ಈ ವರ್ಷವೂ ಪಟಾಕಿಗಳನ್ನು ನಿಷೇಧಿಸಲು ನಿರ್ಧರಿಸಿದ್ದೇವೆ. ಇದಕ್ಕೆ ಪೂರಕವಾಗಿ ಅಧಿಕಾರಿಗಳಿಗೆ ಪಟಾಕಿ ಪರವಾನಗಿ ನೀಡುವುದನ್ನು ತಡೆಯುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಧಾರ್ಮಿಕ ನಂಬಿಕೆಗಳನ್ನು ಆಚರಿಸಬೇಕು. ನಾವು ದೀಪಗಳೊಂದಿಗೆ ದೀಪಾವಳಿಯನ್ನು ಆಚರಿಸಬೇಕು. ದೀಪಾವಳಿ ಸಮೀಪಿಸುತ್ತಿದ್ದಂತೆ ಚಳಿಗಾಲದ ಕ್ರಿಯಾ ಯೋಜನೆಯನ್ನು ಜಾರಿಗೆ ತರುವ ಯೋಜನೆಯೊಂದಿಗೆ ಅಧಿಕಾರಿಗಳು ಮಾಲಿನ್ಯದ ಹಾಟ್‌ಸ್ಪಾಟ್‌ಗಳ ಮೇಲ್ವಿಚಾರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ.
ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 200 ರೂ. ದಂಡ ವಿಧಿಸಲಾಗುವುದು ಎಂದು ಕಳೆದ ವರ್ಷ ಸರ್ಕಾರ ಘೋಷಿಸಿತ್ತು. ಅದೇ ನಿಯಮ ಮುಂದುವರಿಯಲಿದೆ. ದೆಹಲಿಯಲ್ಲಿ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ ಮತ್ತು ಮಾರಾಟಕ್ಕೆ 5,000 ರೂಪಾಯಿಗಳವರೆಗೆ ದಂಡ ಮತ್ತು ಸ್ಫೋಟಕ ಕಾಯ್ದೆಯ ಸೆಕ್ಷನ್ 9 ಬಿ ಅಡಿಯಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬಿ.ಕೆ ಹರಿಪ್ರಸಾದ್ ಈ ರೀತಿ ಮಾತಾಡೋದು ಸರಿಯಲ್ಲ: ದಿನೇಶ್ ಗುಂಡೂರಾವ್
Web Stories