ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯ ಉಮಾಮಧುಕೇಶ್ವರ ದೇವರ ರಥೋತ್ಸವದಲ್ಲಿ ಹಿಂದೂಯೇತರ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಇತಿಹಾಸ ಪ್ರಸಿದ್ಧ ಬನವಾಸಿಯ ಉಮಾಮಧುಕೇಶ್ವರ ದೇವರ ರಥೋತ್ಸವ ಏ.11, 12 ರಂದು ನಡೆಯಲಿದೆ. ಈ ವೇಳೆ ದೇವಸ್ಥಾನದ ಸಮೀಪದ ಕಟ್ಟಡ ಅಥವಾ ನಿವೇಶನಗಳಲ್ಲಿ ಹಿಂದೂಯೇತರರಿಗೆ ಮಳಿಗೆ ಗುತ್ತಿಗೆ ಅಥವಾ ಬಾಡಿಗೆ ನೀಡದಿರಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿರ್ಧರಿಸಿದ್ದು, ದೇವಸ್ಥಾನದ ಆವರಣದಲ್ಲಿ ಬ್ಯಾನರ್ ಅಳವಡಿಸಿದೆ. ಇದನ್ನೂ ಓದಿ: ಜನಾಂಗ, ಧರ್ಮ, ಪಕ್ಷವನ್ನು ಬದಿಗಿರಿಸಿ ದೇಶಕ್ಕಾಗಿ ಒಂದಾಗಿ: ಮುತ್ತಯ್ಯ ಮುರುಳೀಧರನ್
ದೇವಸ್ಥಾನದ ಸಮೀಪದ ಜಮೀನು ಕಟ್ಟಡ ಅಥವಾ ನಿವೇಶನಗಳು ಸೇರಿದಂತೆ ಯಾವುದೇ ಸ್ವತ್ತನ್ನು ಹಿಂದೂಗಳಲ್ಲದವರಿಗೆ ಗುತ್ತಿಗೆಗೆ ನೀಡತಕ್ಕದ್ದಲ್ಲ ಎಂದು ಬ್ಯಾನರ್‌ನಲ್ಲಿ ಬರೆಯಲಾಗಿದ್ದು, ರಥೋತ್ಸವದ ಸಂದರ್ಭದಲ್ಲಿ ನೂರಾರು ಮಳಿಗೆಗಳನ್ನು ತೆರೆಯಲಾಗುತ್ತದೆ. ಆದರೆ, ಈ ಬಾರಿ ಹಿಂದೂ ಧರ್ಮೀಯರಿಗೆ ಮಾತ್ರ ಅವಕಾಶ ನೀಡುವುದಾಗಿ ಸಮಿತಿ ತಿಳಿಸಿದ್ದು ಇದೀಗ ಮುಸ್ಲಿಂ ಹೊರತಾಗಿಯೂ ಇತರೆ ಜನಾಂಗದವರಿಗೂ ಇದರ ಬಿಸಿ ತಟ್ಟಲು ಪ್ರಾರಂಭಿಸಿದೆ. ಇದನ್ನೂ ಓದಿ: ಬೆಳಗಾವಿ ಜಿಲ್ಲೆ ವಿಭಜನೆ ಮಾಡುವಂತೆ ಮತ್ತೆ ಉಮೇಶ ಕತ್ತಿ ಒತ್ತಾಯ
ಸೋಮವಾರ ದಿನ ವಿವಿಧ ಹಿಂದೂ ಸಂಘಟನೆಯವರು ದೇವಸ್ಥಾನದ ಆಡಳಿತಮಂಡಳಿಯವರನ್ನು ಸಂಪರ್ಕಿಸಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ನಿಯಮದ ಅನ್ವಯ ಹಿಂದೂಯೇತರರಿಗೆ ಅವಕಾಶ ನೀಡಬಾರದು ಎಂದು ಮನವಿ ನೀಡಿತ್ತು. ಈ ಹಿನ್ನಲೆಯಲ್ಲಿ ದೇವಸ್ಥಾನದ ವ್ಯವಸ್ಥಾಪಕ ಸಮಿತಿ ಈ ನಿರ್ಧಾರವನ್ನು ಕೈಗೊಂಡಿದೆ.