ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಕಳೆದ ವರ್ಷ ಶುರುವಾಗಿದ್ದ ಧರ್ಮ ದಂಗಲ್ ಮತ್ತೆ ಸದ್ದು ಮಾಡ್ತಿದೆ. ಇಷ್ಟು ದಿನ ತಣ್ಣಗಿದ್ದ ಧರ್ಮದ ವಿಚಾರಗಳು ಇದೀಗ ಬಾಂಬ್ ಸ್ಫೋಟದ ಬಳಿಕ ಮತ್ತೆ ಮುನ್ನೆಲೆಗೆ ಬಂದಿದೆ.
Advertisement
ಹೌದು. ಈ ಬಾರಿಯ ಕುಕ್ಕೆ ಸುಬ್ರಹ್ಮಣ್ಯ (Kukke Sri Subrahmanya Swami Temple) ದ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆ (Hindu Jagaran Vedike) ಯ ಸುಬ್ರಹ್ಮಣ್ಯ ಘಟಕ ಬ್ಯಾನರ್ ಅಳವಡಿಸಿದೆ. ಮಾತ್ರವಲ್ಲ ಸಂಘಟನೆಯ ಮುಖಂಡ ಹರಿಪ್ರಸಾದ್ ಎಂಬವರು ಸುಬ್ರಹ್ಮಣ್ಯ ಪೊಲೀಸ್ ಠಾಣೆ (Subrahmanya Police Station) ಗೆ ದೂರು ನೀಡಿದ್ದು ಕ್ಷೇತ್ರದ ಪಾವಿತ್ರ್ಯತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೆ.ಎಲ್.ರಾಹುಲ್
Advertisement
Advertisement
ಕುಕ್ಕೆ ಸುಬ್ರಹ್ಮಣ್ಯದ ಜಾತ್ರಾ ಮಹೋತ್ಸವವಾದ ಚಂಪಾ ಷಷ್ಠೀಯ ಸಂದರ್ಭದಲ್ಲಿ ದೇವಸ್ಥಾನದ ವಠಾರದಲ್ಲಿ ಸಾಕಷ್ಟು ಸಂಖ್ಯೆಯ ತಾತ್ಕಾಲಿಕ ವ್ಯಾಪಾರ ಮಳಿಗೆಗಳನ್ನು ಹಾಕಲಾಗುತ್ತದೆ. ಪ್ರತೀ ವರ್ಷ ಹಿಂದೂ-ಮುಸ್ಲಿಂ ಸೇರಿದಂತೆ ಎಲ್ಲಾ ಜಾತಿ ಧರ್ಮದವರೂ ಇಲ್ಲಿ ವ್ಯಾಪಾರ ನಡೆಸುತ್ತಿದ್ದರು. ಆದರೆ ಈ ಬಾರಿ ಹಿಂದೂಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ವ್ಯಾಪಾರ ನಡೆಸದಂತೆ ತಡೆಯಲು ಪ್ರಯತ್ನಿಸಿದ್ದಾರೆ. ಇದು ಚರ್ಚೆಗೆ ವೇದಿಕೆಯಾಗಿದ್ದು ಪರ-ವಿರೋಧಗಳು ಆರಂಭಗೊಂಡಿದೆ.
Advertisement
ವ್ಯಾಪಾರ ಬಾಯ್ಕಾಟ್ ಇದು ಹೊಸತೇನಲ್ಲದಿದ್ರೂ ಇದೀಗ ಮಂಗಳೂರು ಬಾಂಬ್ ಸ್ಫೋಟ (Mangaluru Bomb Blast) ದ ಬಳಿಕ ಧರ್ಮದ ವಿಚಾರದಲ್ಲಿ ಸದ್ದು ಮಾಡ್ತಿದೆ. ಒಟ್ಟಿನಲ್ಲಿ ಕೆಲದಿನಗಳ ಕಾಲ ತಣ್ಣಗಿದ್ದ ಕರಾವಳಿಯಲ್ಲಿ ಮತ್ತೆ ಧರ್ಮದ ವಿಚಾರಗಳ ವಿವಾದಗಳು ಆರಂಭಗೊಂಡಂತಿದೆ.