ಹೈದರಾಬಾದ್: ಕೇಂದ್ರ ಸರ್ಕಾರವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯನ್ನು ನಿಷೇಧಿಸಿರುವುದಕ್ಕೆ ಸಂಸದ ಹಾಗೂ ಎಐಎಂಐಎಂ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ವಿರೋಧ ವ್ಯಕ್ತಪಡಿಸಿದ್ದಾರೆ. ಸಂಘಟನೆ ನಿಷೇಧವನ್ನು ನಾನು ಬೆಂಬಲಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಪಿಎಫ್‌ಐ ನಿಲುವಿಗೆ ನನ್ನ ವಿರೋಧವಿದೆ. ಪ್ರಜಾಪ್ರಭುತ್ವದ ವಿಧಾನವನ್ನು ನಾನು ಬೆಂಬಲಿಸುತ್ತೇನೆ. ಆದರೆ ಸಂಘಟನೆ ಮೇಲಿನ ನಿಷೇಧವನ್ನು ನಾನು ಬೆಂಬಲಿಸುವುದಿಲ್ಲ ಎಂದು ಓವೈಸಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಉಗ್ರ ಸಂಘಟನೆಗಳ ಜೊತೆ ಲಿಂಕ್ – ಈ ಕ್ಷಣದಿಂದಲೇ PFI, 8 ಅಂಗ ಸಂಸ್ಥೆಗಳು ಬ್ಯಾನ್
Advertisement
Advertisement
ಈ ರೀತಿಯ ಕಠೋರವಾದ ನಿಷೇಧವು ಅಪಾಯಕಾರಿ. ಏಕೆಂದರೆ ತನ್ನ ಮನಸ್ಸಿನಲ್ಲಿರುವುದನ್ನು ಹೇಳಲು ಬಯಸುವ ಯಾವುದೇ ಮುಸಲ್ಮಾನನ ಮೇಲೆ ನಿಷೇಧ ವಿಧಿಸಿದಂತಾಗುತ್ತದೆ. ದೇಶದಲ್ಲಿ ಪ್ರತಿಯೊಬ್ಬ ಮುಸ್ಲಿಂ ಯುವಕರನ್ನು ಯುಎಪಿಎ ಅಡಿಯಲ್ಲಿ ಪಿಎಫ್‌ಐ ಕರಪತ್ರದೊಂದಿಗೆ ಬಂಧಿಸಬಹುದು ಎಂದು ಹೇಳಿದ್ದಾರೆ.
Advertisement
Advertisement
ಮಂಗಳವಾರ ತಡರಾತ್ರಿ ಹೊರಡಿಸಿದ ಅಧಿಸೂಚನೆಯಲ್ಲಿ ಕೇಂದ್ರ ಗೃಹ ಸಚಿವಾಲಯವು ಪಿಎಫ್‌ಐ ಅನ್ನು ನಿಷೇಧಿಸಿದೆ. ಕೇಂದ್ರ ಸರ್ಕಾರವು ಇಸ್ಲಾಮಿ ಸಂಘಟನೆ ಮತ್ತು ಅದರ ಅಂಗಸಂಸ್ಥೆಗಳು ವಿಧ್ವಂಸಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆ ಎಂದು ಅಭಿಪ್ರಾಯಪಟ್ಟಿದೆ. ಕೇಂದ್ರದ ನಿಲುವಿಗೆ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಪಿಎಫ್‌ಐನಂತೆಯೇ ಆರ್‌ಎಸ್‌ಎಸ್ (RSS) ಅನ್ನು ಕೂಡ ಬ್ಯಾನ್ ಮಾಡಬೇಕು ಎಂದು ಅನೇಕ ಕಾಂಗ್ರೆಸ್ (Congress) ಸೇರಿದಂತೆ ವಿಪಕ್ಷಗಳು ಹಾಗೂ ಸಂಘಟನೆಗಳು ಒತ್ತಾಯಿಸಿವೆ. ಇದನ್ನೂ ಓದಿ: ಪಿಎಫ್‌ಐ ನಂತೆಯೇ RSSನ್ನೂ ಬ್ಯಾನ್ ಮಾಡಿ: ಕೇರಳ ವಿಪಕ್ಷಗಳ ಒತ್ತಾಯ