ನವದೆಹಲಿ: ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು 2022ರ ಜನವರಿ 1ರವರೆಗೆ ನಿಷೇಧಿಸಿ ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಆದೇಶಿಸಿದೆ.
ಎಲ್ಲಾ ರೀತಿಯ ಪಟಾಕಿಗಳನ್ನು ಈ ಅವಧಿಯಲ್ಲಿ ನಿಷೇಧಿಸಲಾಗಿದ್ದು, ವಾಯುಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ. ಕೆಲವೇ ದಿನಗಳಲ್ಲಿ ಸಾಲುಸಾಲು ಹಬ್ಬಗಳು ಬರಲಿದ್ದು ಹಬ್ಬಗಳ ಆಚರಣೆಯಲ್ಲಿ ಪಟಾಕಿ ಸಿಡಿಸುವುದು ವಾಯುಮಾಲಿನ್ಯಕ್ಕೆ ಕಾರಣವಾಗಲಿದೆ. ಹೀಗಾಗಿ ಪಟಾಕಿ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ತಿಳಿಸಿದೆ.
Advertisement
Advertisement
ಪಟಾಕಿಗಳನ್ನು ಸಿಡಿಸುವುದರಿಂದ ವಿಪರೀತ ವಾಯುಮಾಲಿನ್ಯವಾಗುತ್ತದೆ. ಶ್ವಾಸಕೋಶ ಸಂಬಂಧಿತ ಖಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಈಗಾಗಲೇ ಹಲವು ಪರಿಣಿತರು ಸರ್ಕಾರಕ್ಕೆ ಸಲಹೆ ನೀಡಿದ್ದರು. ಈ ಸಲಹೆ ಆಧರಿಸಿ ಪಟಾಕಿ ನಿಷೇಧದ ನಿರ್ಣಯ ಕೈಗೊಳ್ಳಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ. ಅಲ್ಲದೇ ವಾಯುಮಾಲಿನ್ಯ ಕೋವಿಡ್ ಪಿಡುಗಿನ ಈ ಸಂದರ್ಭದಲ್ಲಿ ವೃದ್ಧರು ಮತ್ತು ಚಿಕ್ಕಮಕ್ಕಳ ಶ್ವಾಸಕೋಶಕ್ಕೆ ಹಾನಿಯುಂಟು ಮಾಡುವ ಸಂಭಾವ್ಯತೆಯೂ ಹೆಚ್ಚಿದೆ. ಹೀಗಾಗಿ ಪಟಾಕಿಯ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್‍ಗೆ ನಡುಕ- ಸಿಧು ಬೆನ್ನಲ್ಲೇ ನಾಲ್ವರು ರಾಜೀನಾಮೆ
Advertisement
Advertisement
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯವಂತೂ ಮಿತಿಮೀರಿದೆ. ಅಲ್ಲಿನ ಜನರು ಸ್ವಚ್ಛಗಾಳಿ ಉಸಿರಾಡಲು ಸಾಧ್ಯವಾಗದೆ ಶ್ವಾಸಕೋಶಿ ಸಂಬಂಧಿತ ಕಾಯಿಲೆಗಳಿಂದ ಬಳಲುವವರ ಸಂಖ್ಯೆ ಹೆಚ್ಚಾಗಿದೆ. ಹೀಗಿರುವಾದ ದೆಹಲಿ ಸರ್ಕಾರ ಜನರಿಗೊಂದು ಗುಡ್‍ನ್ಯೂಸ್ ಕೊಟ್ಟಿದೆ. ದೆಹಲಿಯ ಕೊನಾಟ್ ಪ್ರದೇಶದಲ್ಲಿ ನಿರ್ಮಾಣವಾದ ಹೊಗೆ ಗೋಪುರದ ಪ್ರಯೋಗ ಮುಗಿದಿದೆ. ಅಕ್ಟೋಬರ್ 1ರಿಂದ ಈ ಗೋಪುರ ಕಾರ್ಯ ನಿರ್ವಹಿಸಲಿದೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರಾಯ್ ತಿಳಿಸಿದ್ದಾರೆ. ಇಂದು ಟ್ವೀಟ್ ಮಾಡಿರುವ ಅವರು, ಹೊಗೆ ಗೋಪುರದ ಪ್ರಾಯೋಗಿಕ ಕಾರ್ಯ ಮುಕ್ತಾಯವಾಗಿದೆ. ಅಕ್ಟೋಬರ್ 1ರಿಂದ ಪೂರ್ಣ ಪ್ರಮಾಣದಲ್ಲಿ ಇದು ಕೆಲಸ ನಿರ್ವಹಿಸಲಿದೆ. ಉಸ್ತುವಾರಿ, ಮೇಲ್ವಿಚಾರಣೆ ನೋಡಿಕೊಳ್ಳಲು ಐಐಟಿ-ಬಾಂಬೆ, ಐಐಟಿ-ದೆಹಲಿ ಮತ್ತು ಡಿಪಿಸಿಸಿಯ ವಿಜ್ಞಾನಿಗಳ ತಂಡ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.