ಅದಾ ಶರ್ಮಾ (Adah Sharma) ಮುಖ್ಯ ಭೂಮಿಕೆಯ ದಿ ಕೇರಳ ಸ್ಟೋರಿ (The Kerala Story) ದೇಶದಾದ್ಯಂತ ಸಾಕಷ್ಟು ಸದ್ದು ಮಾಡುತ್ತಿದೆ. ಕೇರಳದಲ್ಲಿ ಥಿಯೇಟರ್ ಮಾಲೀಕರು ಚಿತ್ರ ಪ್ರದರ್ಶನಕ್ಕೆ ಹಿಂದೇಟು ಹಾಕಿದ್ದರೆ, ತಮಿಳು ನಾಡಿನಲ್ಲೂ(Tamil Nadu) ಅಘೋಷಿದ ನಿಷೇಧ ಹೇರಲಾಗಿದೆ. ಹಾಗಾಗಿ ಆ ರಾಜ್ಯದಲ್ಲೂ ಚಿತ್ರ ಪ್ರದರ್ಶನವಿಲ್ಲ. ಇನ್ನು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಚಿತ್ರಕ್ಕೆ ನಿಷೇಧವನ್ನೇ ಹೇರಿದ್ದಾರೆ. ಹೀಗಾಗಿ ನಿರ್ಮಾಪಕರು ಅಕ್ಷರಶಃ ಕಂಗಾಲಾಗಿದ್ದಾರೆ. ಈ ಕುರಿತಂತೆ ಅವರು ಕೋರ್ಟ್ ಮೊರೆ ಹೋಗಿದ್ದಾರೆ.
Advertisement
ದಿ ಕೇರಳ ಸ್ಟೋರಿ ಚಿತ್ರದ ನಿರ್ಮಾಪಕರು ಪಶ್ಚಿಮ ಬಂಗಾಳದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ (Supreme Court) ಅರ್ಜಿ ಸಲ್ಲಿಸಿದ್ದು, ಅದೇ ಅರ್ಜಿಯಲ್ಲೇ ತಮಿಳು ನಾಡು ಸರಕಾರಕ್ಕೆ ಚಿತ್ರಮಂದಿರಗಳಿಗೆ ಭದ್ರತೆ ನೀಡುವಂತೆ ಸೂಚಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಭದ್ರತೆ ದೃಷ್ಟಿ ಕಾರಣವನ್ನು ನೀಡಿ ತಮಿಳು ನಾಡಿನ ಚಿತ್ರಮಂದಿರಗಳ ಮಾಲೀಕರು ಪ್ರದರ್ಶನಕ್ಕೆ ಹಿಂದೇಟು ಹಾಕಿದ್ದರಿಂದ ಒಂದೇ ಅರ್ಜಿಯಲ್ಲೇ ಎರಡೂ ವಿಷಯಗಳನ್ನು ಪ್ರಸ್ತಾಪ ಮಾಡಿದೆ ಚಿತ್ರತಂಡ.
Advertisement
Advertisement
ದೇಶದಾದ್ಯಂತ ‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿದೆ. ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ಮೂಡಿ ಬಂದಿದ್ದು, ಕೇರಳದಲ್ಲೂ ಚಿತ್ರ ಪ್ರದರ್ಶನಕ್ಕೆ ಥಿಯೇಟರ್ ಮಾಲೀಕರು ಹಿಂದೇಟು ಹಾಕಿದ್ದರು. ಕೇರಳ ಸರಕಾರದ ಸಪೋರ್ಟ್ ಇಲ್ಲದ ಕಾರಣದಿಂದಾಗಿ ಮತ್ತು ಪ್ರತಿಭಟನೆಯ ಕಾವು ಜೋರಾಗಿದ್ದರಿಂದ ಚಿತ್ರಮಂದಿರಗಳ ಮಾಲೀಕರು ಭಯದಲ್ಲಿದ್ದಾರಂತೆ. ಈ ಕಾರಣದಿಂದಾಗಿ ಸಾಕಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಿಲ್ಲ. ಇದನ್ನೂ ಓದಿ:ಮ್ಯಾರೇಜ್ ಆ್ಯನಿವರ್ಸರಿ ದಿನ ಮೊದಲ ಬಾರಿಗೆ ಮಗನ ಮುಖ ರಿವೀಲ್ ಮಾಡಿದ ಸೋನಂ ಕಪೂರ್
Advertisement
ಈಗಾಗಲೇ ವಿವಾದಕ್ಕೆ ಕಾರಣವಾಗುವಂತಹ ಮತ್ತು ಆಕ್ಷೇಪಕ್ಕೆ ಗುರಿಯಾಗಿರುವ ಹಲವು ದೃಶ್ಯಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ. ಬರೋಬ್ಬರಿ 10 ದೃಶ್ಯಗಳಿಗೆ ಕತ್ತರಿ ಹಾಕುವ ಮೂಲಕ ಚಿತ್ರತಂಡಕ್ಕೆ ಶಾಕ್ ನೀಡಿದೆ. ಅಲ್ಲದೇ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ನೀಡಿದೆ. ಮಾಜಿ ಸಿಎಂ ಒಬ್ಬರ ಸಂದರ್ಶನ, ಕೆಲ ಸಂಭಾಷಣೆಗಳು ಹಾಗೂ ಕಮ್ಯುನಿಸ್ಟ್ ಪಕ್ಷದವರ ಬಗ್ಗೆ ಆಡಿದ ಮಾತುಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ.