ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election) ದಿನಾಂಕ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಕಾರ್ಯ ಹಾಗೂ ಪ್ರಚಾರ (Election Campaign) ಕಾರ್ಯದಲ್ಲಿ ಮಕ್ಕಳ ಬಳಕೆಯನ್ನು ನಿಷೇಧಿಸಲಾಗಿದೆ.
ರಾಜಕೀಯ ಪಕ್ಷಗಳ ಮೆರವಣೆಗೆ, ಸಾರ್ವಜನಿಕ ಭಾಷಣ, ಮನೆ ಮನೆಗೆ ಭೇಟಿ ನೀಡುವುದು, ಪಕ್ಷದ ಚಿಹ್ನೆಯಿರುವ ಪುಸ್ತಕ ಮತ್ತು ಬಟ್ಟೆಗಳನ್ನು ಹಂಚುವುದು, ಕರಪತ್ರ ಹಂಚುವುದು ಮುಂತಾದ ಚಟುವಟಿಕೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಂಡಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಅಪರ ಜಿಲ್ಲಾ ಚುನಾವಣಾಧಿಕಾರಿ (Election Officer) ಹಾಗೂ ಜಿಲ್ಲಾಧಿಕಾರಿ ಕೆ.ಎ ದಯಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Karnataka Election 2023- ಮೇ 10 ರಂದು ಮತದಾನ, ಮೇ 13ಕ್ಕೆ ಫಲಿತಾಂಶ
ಕರ್ನಾಟಕ ವಿಧಾನಸಭಾ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ. ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಈಗಾಗಲೇ ಚುನಾವಣಾ ಆಯೋಗ ತಿಳಿಸಿದೆ. ಇದನ್ನೂ ಓದಿ: ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭ