ಬೆಂಗಳೂರು: ಬಂಡೀಪುರ (Bandipur) ಅರಣ್ಯದಲ್ಲಿ ರಾತ್ರಿ ಸಂಚಾರ ಇಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwara Khandre) ಪುನರುಚ್ಚರಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡುವ ಪರವಾಗಿ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿಯವರು ಇತ್ತೀಚೆಗೆ ಮಾತಾಡಿದ್ದರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದಲೂ ಪ್ರಿಯಾಂಕಾ ಗಾಂಧಿ ಅವರ ನಿಲುವಿಗೆ ಬೆಂಬಲ ವ್ಯಕ್ತವಾಗಿತ್ತು. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸದ್ಯ ರಾತ್ರಿ 9 ಗಂಟೆವರೆಗೆ ಮಾತ್ರ ರಾತ್ರಿ ಸಂಚಾರಕ್ಕೆ ಅವಕಾಶ ಇದೆ. ಅದು ಹೊರತುಪಡಿಸಿ ರಾತ್ರಿ 9 ಗಂಟೆ ನಂತರ 2 ಬಸ್‌ಗಳ ಮಾತ್ರ ಸಂಚಾರಕ್ಕೆ ಅವಕಾಶ ಕೊಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನು ಹೊರತುಪಡಿಸಿ ಆಸ್ಪತ್ರೆ ಸೇರಿ ಎಮರ್ಜೆನ್ಸಿ ಇದ್ದರೆ ಅದಕ್ಕೂ ಅವಕಾಶ ಮಾಡಿಕೊಡಲಾಗಿದೆ. ಉಳಿದಂತೆ ವನ್ಯಜೀವಿ ಸಂರಕ್ಷಣೆ ಹಿನ್ನಲೆ ರಾತ್ರಿ ಸಂಚಾರಕ್ಕೆ ಅವಕಾಶ ಇಲ್ಲ. ಹೀಗಾಗಿ ರಾತ್ರಿ ಸಂಚಾರ ಸಾಧ್ಯವಿಲ್ಲ. ಈ ಬಗ್ಗೆ ನಮ್ಮ ನಾಯಕರಿಗೆ ಏನಾದರೂ ಮಾಹಿತಿ ಅಗತ್ಯವಿದ್ದರೆ ಮನವರಿಕೆ ಮಾಡುತ್ತೇನೆ ಎಂದಿದ್ದಾರೆ.
Advertisement