ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಜಲಸಾಹಸ ಕ್ರೀಡೆಗಳಿಗೆ ಹೇರಲಾಗಿದ್ದ ನಿರ್ಬಂಧವನ್ನು ಒಂದೇ ದಿನದಲ್ಲಿ ತೆರವುಗೊಳಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಹವಾಮಾನ ವೈಪರಿತ್ಯದಿಂದ ಜಿಲ್ಲೆಯ ಜಲಸಾಹಸ ಕ್ರೀಡೆಗಳಿಗೆ (Water Activities) ಪ್ರವಾಸೋದ್ಯಮ ಇಲಾಖೆ ಮುಂಗಾರು ಮುಗಿಯುವವರೆಗೆ ನಿರ್ಬಂಧ ವಿಧಿಸಿತ್ತು. ಈ ಆದೇಶವನ್ನು ಜಿಲ್ಲಾಡಳಿತ ಹಿಂಪಡೆದು ಹೊಸ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಜಲಸಾಹಸ ಕ್ರೀಡೆಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಪ್ರವಾಸೋದ್ಯಮ ಇಲಾಖೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರದೇ ನಿಷೇಧ ಹೇರಿತ್ತು. ಈ ಹಿನ್ನೆಲೆಯಲ್ಲಿ ನಿಷೇಧ ಆದೇಶವನ್ನು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಹಿಂಪಡೆದು ಜಿಲ್ಲೆಯ ಗೋಕರ್ಣ, ಮುರುಡೇಶ್ವರ, ಕಾರವಾರ, ಹೊನ್ನಾವರ, ದಾಂಡೇಲಿ ಭಾಗದಲ್ಲಿ ಜಲಸಾಹಸ ಕ್ರೀಡೆಗಳಿಗೆ ನಿಷೇಧ ತೆರವು ಮಾಡಿದ್ದಾರೆ.

