ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ನಿಂದಿಸಿ ವಿಡಿಯೋ ಮಾಡಿದ್ದ ಯುವಕನನ್ನು ಬಾಣಾಸವಾಡಿ ಪೊಲೀಸರು (Banasavadi Police) ವಶಕ್ಕೆ ಪಡೆದಿದ್ದಾರೆ.
ನಗರದ ಹಡ್ಸನ್ ಎಂಬಾತನ ಮೇಲೆ ಎಫ್ ಐಆರ್ ದಾಖಲಾಗಿದೆ. ಈತ ಅವಾಚ್ಯ ಶಬ್ದ ಬಳಸಿ ಮೋದಿಯನ್ನು ನಿಂದಿಸಿ ವಿಡಿಯೋ ಮಾಡಿದ್ದ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿತ್ತು. ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪನೆ, ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುವವರನ್ನು ಕ್ಷಮಿಸಲ್ಲ: ಮೋದಿ
ಈ ವಿಡಿಯೋ ವಿರುದ್ಧ ಸರ್ವಜ್ಞನಗರ ಬಿಜೆಪಿ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿತ್ತು. ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದಿರುವ ಬಾಣಸವಾಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಯುವಕರ ಭವಿಷ್ಯ ಹಾಳು ಮಾಡಿದ್ದು ನೀವು: ಮೋದಿ ವಿರುದ್ಧ ರಾಗಾ ಆಕ್ರೋಶ
