ಬೀದರ್: ರಾಜ್ಯದಲ್ಲಿ ಈ ಬಾರಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಿಎಂ ಆಗುವುದು ಪಕ್ಕಾ ಇದೆ. ಆದರೆ ಈ ಬಾರಿ ಇನ್ನೊಂದು ಪಕ್ಷದೊಂದಿಗೆ ಮೈತ್ರಿ ಮಾಡಬಾರದು ಎಂದು ಪರೋಕ್ಷವಾಗಿ ಸಮ್ಮಿಶ್ರ ಸರ್ಕಾರ ಬೇಡ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ವಿಶ್ವಾಸ ವ್ಯಕ್ತಪಡಿಸಿದರು.
Advertisement
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲು 20 ತಿಂಗಳು ಬಳಿಕ 14 ತಿಂಗಳು ಜೊತೆಯಾಗಿ ಸಮ್ಮಿಶ್ರ ಸರ್ಕಾರ ಮಾಡಿ ಸಾಲ ಮನ್ನಾ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳನ್ನು ಮಾಡಿದರೂ ಸಹಿತ ಸಮ್ಮಿಶ್ರ ಸರ್ಕಾರ ಉಳಿಯಲಿಲ್ಲ ಎಂದರು. ಇದನ್ನೂ ಓದಿ: ಪಿಎಸ್ಐ ನೇಮಕಾತಿ ಅಕ್ರಮ ವಿಚಾರ – 7ನೇ ರ್ಯಾಂಕ್ ಪಡೆದಿದ್ದ ಕಲಬುರಗಿ ಅಭ್ಯರ್ಥಿ ಸಿಐಡಿ ವಶಕ್ಕೆ
Advertisement
Advertisement
ಸಿಎಂ ಇಬ್ರಾಹಿಂ ಜೆಡಿಎಸ್ ಬರೋದು ಪಕ್ಕಾ. ಆದರೆ ರೋಷನ್ ಬೇಗ್ ಜೆಡಿಎಸ್ಗೆ ಬರೋದು ಗೋತ್ತಿಲ್ಲ. ಕಾಂಗ್ರೆಸ್ – ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಸಮಯ ಬಂದಾಗ ಹೇಳುತ್ತೆನೆ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿಯವರು ಗೊಂದಲ ಮೂಡಿಸುವ ಕೆಲಸ ಮಾಡಬಾರದು: ಬಿಎಸ್ವೈ