ಯಾದಗಿರಿ: ಸಿಎಂ ಸಿದ್ದರಾಮಯ್ಯ ಬುಧವಾರ ಮಂಡಿಸಿದ ಬಜೆಟ್‍ನಲ್ಲಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣವನ್ನು ತಾಲೂಕು ಕೇಂದ್ರವೆಂದು ಘೋಷಣೆ ಮಾಡದಿರುವದನ್ನು ಖಂಡಿಸಿ ಇಂದು ಕೆಂಭಾವಿ ಪುರಸಭೆ ಸದಸ್ಯರು ಹಾಗೂ ವಿವಿಧ ಸಂಘಟನೆ ಮುಖಂಡರು ಹಾಗೂ ಪಟ್ಟಣದ ನಿವಾಸಿಗಳು ಕೆಂಭಾವಿ ಪಟ್ಟಣದಲ್ಲಿ ಬಂದ್ ಆಚರಿಸಿದ್ದಾರೆ.
Advertisement
ಬೆಳಗ್ಗೆಯಿಂದಲೇ ಕೆಂಭಾವಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನಾ ನಿರತರು ಟೈರ್‍ಗೆ ಬೆಂಕಿ ಹಚ್ಚಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆಂಭಾವಿ ಪಟ್ಟಣ ಬಂದ್‍ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪ್ರತಿಭಟನಾಕಾರರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿರುವುದರಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು ಪ್ರಯಾಣಿಕರು ತೊಂದರೆ ಅನುಭವಿಸಿದ್ರು.
Advertisement
Advertisement
ಸಾಮೂಹಿಕ ರಾಜೀನಾಮೆ: ಕೆಂಭಾವಿ ಪಟ್ಟಣವನ್ನು ತಾಲೂಕು ಕೇಂದ್ರವೆಂದು ಘೋಷಣೆ ಮಾಡದಿರುವುಕ್ಕೆ ಶುಕ್ರವಾರದಂದು ಪುರಸಭೆಯ 23 ಸದಸ್ಯರು ಪಕ್ಷಭೇದ ಮರೆತು ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸದಸ್ಯರ ಸಾಮೂಹಿಕ ರಾಜೀನಾಮೆ ನಂತರ ಇಂದು ಕೆಂಭಾವಿ ಪಟ್ಟಣ ಬಂದ್ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಕೆಂಭಾವಿಯನ್ನು ತಾಲೂಕು ಕೇಂದ್ರವೆಂದು ಘೋಷಣೆ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
Advertisement
ಸಿದ್ದರಾಮಯ್ಯನವರು ಬಜೆಟ್ ಮಂಡನೆ ವೇಳೆ ಕೆಂಭಾವಿ ಪಟ್ಟಣವನ್ನು ಹೊರತುಪಡಿಸಿ ಜಿಲ್ಲೆಯ ವಡಗೇರಾ, ಗುರುಮಠಕಲ್, ಹುಣಸಗಿ ಹೋಬಳಿ ಕೇಂದ್ರಗಳನ್ನು ತಾಲೂಕು ಕೇಂದ್ರವೆಂದು ಘೋಷಣೆ ಮಾಡಿದ್ದಾರೆ.