ಬೆಂಗಳೂರು: ಮಂಗಳವಾರ ಬೆಂಗಳೂರು ಬಂದ್‌ಗೆ (Bengaluru Bandh) ಕರೆ ಕೊಟ್ಟಿರುವ ಸಂಘಟನೆಗಳಿಗೆ ಬಂದ್ ಕೈ ಬಿಡುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಮನವಿ ಮಾಡಿದ್ದಾರೆ.
ಬೆಂಗಳೂರು ಬಂದ್ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸಂಘಟನೆಗಳಿಗೆ ಬಂದ್ ಮಾಡದಂತೆ ಮನವಿ ಮಾಡಿದ್ದೇನೆ. ಮತ್ತೊಂದು ಬಾರಿ ಮನವಿ ಮಾಡುತ್ತೇನೆ. ನೀವು ಪ್ರತಿಭಟನೆ (Protest) ಮಾಡಲು ನಮ್ಮ ತಕರಾರು ಇಲ್ಲ. ಪ್ರತಿಭಟನೆ ಮಾಡೋದು ನಿಮ್ಮ ಹಕ್ಕು. ರಾಜ್ಯದ ಹಿತದೃಷ್ಟಿಯಿಂದ ಪ್ರತಿಭಟನೆ ಮಾಡಬಹುದು. ಆದರೆ ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡಬಾರದು. ಸಾರ್ವಜನಿಕ ಆಸ್ತಿಗಳಿಗೆ ತೊಂದರೆ ಮಾಡಬಾರದು. ಜನರಿಗೆ ತೊಂದರೆ ಮಾಡಬಾರದು. ಕಾನೂನುಬಾಹಿರ ಚಟುವಟಿಕೆಗಳು ಆಗದಂತೆ ನೋಡಿಕೊಳ್ಳಬೇಕು ಎಂದರು. ಇದನ್ನೂ ಓದಿ: ಬಿಎಸ್‌ವೈ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ
Advertisement
Advertisement
ಬೆಂಗಳೂರಿನಲ್ಲಿ ಬಂದ್ ಮಾಡುವಾಗ ಸ್ವಲ್ಪ ಆತಂಕ ಇರುತ್ತದೆ. ಜನ ಸಮುದಾಯ ಓಡಾಡಲು ಸಮಸ್ಯೆ ಆಗುತ್ತದೆ. ಇದೆಲ್ಲವನ್ನೂ ಗಮನಕ್ಕೆ ತೆಗೆದುಕೊಂಡಿದ್ದೇವೆ. ಪೊಲೀಸ್ ಇಲಾಖೆ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕೋ ಅದೆಲ್ಲವನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ ಅಧಿಕಾರಿಗಳ ಸಭೆ ಮಾಡಿಕೊಂಡು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಮತ್ತಷ್ಟು ನೀರು
Advertisement
ಬಂದ್ ಮಾಡುವುದರಿಂದ ನಮ್ಮ ಸಮಸ್ಯೆ ಬಗೆಹರಿಯುವುದಿಲ್ಲ. ನಮಗೆ ನೀರಿಲ್ಲದ ಕಾಲದಲ್ಲಿ ನೀರು ಬಿಡಿ ಎಂದು ಹೇಳುತ್ತಿದ್ದಾರೆ. ಕಾವೇರಿ ಬೋರ್ಡ್ ಅವರಿಗೆ ಒಂದು ಸಂದೇಶ ಕೊಟ್ಟ ಹಾಗೆ ಆಗುತ್ತದೆ ಎಂದು ಸಂಘಟನೆಗಳು ಬಂದ್ ಮಾಡುತ್ತಿದ್ದಾರೆ ಎನಿಸುತ್ತಿದೆ. ಸರ್ಕಾರ ಏನು ಕೆಲಸ ಮಾಡಬೇಕೋ ಅದನ್ನು ಮಾಡಿದೆ. ಬೋರ್ಡ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ನಮ್ಮ ವಕೀಲರ ತಂಡ ಎಫೆಕ್ಟಿವ್ ಆಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಒಂದೊಂದು ಸಾರಿ ಕಾನೂನಿನ ವ್ಯವಸ್ಥೆ ಯಾವ ಕಡೆ ಹೋಗುತ್ತದೆ ಎಂದು ಹೇಳಲು ಆಗುವುದಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಇದನ್ನೂ ಓದಿ: KPSC ಸದಸ್ಯರಾಗಿ ಮುಸ್ತಫಾ ನೇಮಕ
Advertisement
ಬಂದ್‌ನಿಂದ ಜನ ಸಾಮಾನ್ಯರಿಗೆ, ಸಾರ್ವಜನಿಕರಿಗೆ ಸಮಸ್ಯೆ ಆಗುತ್ತದೆ. ಬಂದ್‌ನಿಂದ ನಾವೇನು ಸಾಧನೆ ಮಾಡುವುದಿಲ್ಲ. ಸರ್ಕಾರ ಮನವಿ ಮಾಡಿದ ಮೇಲೂ ಬಂದ್ ಮಾಡೋದು ಸಂಘಟನೆಗಳ ವಿವೇಚನೆಗೆ ಬಿಟ್ಟಿದ್ದು. ಬೆಂಗಳೂರು ಬಂದ್‌ಗೆ ಪೊಲೀಸ್ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಬಿಗಿ ಭದ್ರತೆ ಮಾಡಿಕೊಂಡಿದ್ದೇವೆ. ಕೆಎಸ್‌ಆರ್‌ಪಿ ಟೀಂ ರೆಡಿ ಇದೆ. ಅದನ್ನು ನಿಯೋಜನೆ ಮಾಡಲಾಗುತ್ತದೆ. ಎಲ್ಲೆಲ್ಲಿ ಅಗತ್ಯ ಇದೆಯೋ ಅಲ್ಲಿಗೆ ಪೊಲೀಸ್ ಫೋರ್ಸ್ ಹಾಕತ್ತೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಮಂಗಳವಾರ ಬೆಂಗಳೂರು ಬಂದ್ ಇರುತ್ತಾ? – ಕನ್ನಡ ಸಂಘಟನೆಗಳಿಂದ ತಟಸ್ಥ ಧೋರಣೆ
ಬಂದ್‌ಗೆ ಬಿಜೆಪಿ-ಜೆಡಿಎಸ್ ಬೆಂಬಲ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರಿಬ್ಬರು ಈಗ ತಾನೆ ಒಂದಾಗಿದ್ದಾರೆ. ದೋಸ್ತಿ ಮಾಡಿಕೊಂಡಿದ್ದಾರೆ. ಹಾಗಾಗಿ ಒಂದು ಪ್ರದರ್ಶನ ಮಾಡಬೇಕು ಅಲ್ಲವಾ. ಅದಕ್ಕೆ ಬಂದ್‌ಗೆ ಬೆಂಬಲ ಕೊಡುತ್ತಿದ್ದಾರೆ. ರಾಜ್ಯದ ಹಿತದೃಷ್ಟಿ ಅವರಿಗೂ ಇದೆ. ಬಿಜೆಪಿ-ಜೆಡಿಎಸ್ ಕೂಡಾ ಜವಾಬ್ದಾರಿಯುತವಾಗಿ ನಡೆದುಕೊಂಡರೆ ಒಳ್ಳೆಯದು ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಕಾವೇರಿ, ಹೇಮಾವತಿ ನೀರಿಗಾಗಿ ಮಂಗಳವಾರ ಕೆಆರ್ ಪೇಟೆ ಬಂದ್
ಸರ್ಕಾರ ಹೇಳದೇ ಕೇಳದೇ ನೀರು ಬಿಟ್ಟಿಲ್ಲ. ಮೊದಲ ಬಾರಿಗೆ ಎಲ್ಲಾ ಪಕ್ಷಗಳ ಸಭೆ ಕರೆಯಲಾಗಿತ್ತು. ಆ ಸಮಯದಲ್ಲಿ ಸಿಎಂ, ಡಿಸಿಎಂ, ಲೀಗಲ್ ಟೀಂ ಎಲ್ಲಾ ಪಕ್ಷಗಳಿಗೂ ವಿವರಣೆ ನೀಡಿದ್ದಾರೆ. ಎಲ್ಲಾ ವಿಷಯಗಳನ್ನು ಎಲ್ಲರಿಗೂ ತಿಳಿಸಿದ್ದೇವೆ. ಯಾವುದೇ ಮುಚ್ಚಿಟ್ಟು ವ್ಯವಹಾರ ಮಾಡುವ ಕೆಲಸ ಮಾಡಿಲ್ಲ. ರಾಜ್ಯದ ಹಿತವನ್ನು ಕಾಪಾಡಲು ನಾವು ಹೇಗೆ ಬದ್ಧವಾಗಿ ಇದ್ದೇವೋ ಅವರು ಕೂಡಾ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಬಂದ್ ಮಾಡಿದರೆ ಬ್ರ್ಯಾಂಡ್ ಬೆಂಗಳೂರಿಗೆ ಧಕ್ಕೆ – ಡಿಕೆಶಿ ಹೇಳಿಕೆಗೆ ಆಕ್ರೋಶ
Web Stories